
ದುಬೈ(ಮೇ.05): ಮಹಿಳೆಯರ ಕ್ರಿಕೆಟನ್ನು ಮತ್ತಷ್ಟು ಜನಪ್ರಿಯಗೊಳಿಸಲು ಮುಂದಾಗಿರುವ ಐಸಿಸಿ, ಇದೇ ಜೂನ್ 24ರಿಂದ ಆರಂಭಗೊಳ್ಳಲಿರುವ ಏಕದಿನ ವಿಶ್ವಕಪ್ ಪ್ರಶಸ್ತಿ ಮೊತ್ತವನ್ನು 10 ಪಟ್ಟು ಹೆಚ್ಚಿಸಲಾಗಿದೆ.
ಕಳೆದ ಬಾರಿ 2 ಲಕ್ಷ ಡಾಲರ್ (1.28 ಕೋಟಿ ರೂಪಾಯಿ) ಇದ್ದ ಬಹುಮಾನ ಮೊತ್ತವನ್ನು ಈ ಬಾರಿ 20 ಲಕ್ಷ ಡಾಲರ್ (ರೂ.12.84 ಕೋಟಿ)ಗೆ ಏರಿಸಲಾಗಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಐಸಿಸಿ ಪ್ರಧಾನ ಕಾರ್ಯದರ್ಶಿ ಡೇವಿಡ್ ರಿಚರ್ಡ್'ಸನ್ ‘‘ಮಹಿಳಾ ಕ್ರಿಕೆಟ್'ಗೂ ಸಮಾನತೆ ಹಾಗೂ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಇದೊಂದು ಪ್ರಮುಖ ಹೆಜ್ಜೆಯಾಗಿದ್ದು, ಈ ಒಂದು ಘೋಷಣೆ ಸಾಕು ನಮ್ಮ ಬದ್ಧತೆ ಏನೆಂಬುದನ್ನು ತಿಳಿಯಲು'' ಎಂದಿದ್ದಾರೆ.
ಜೂನ್ 24ರಿಂದ ಇಂಗ್ಲೆಂಡ್'ನಲ್ಲಿ ಆರಂಭವಾಗಲಿರುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ವನಿತೆಯರ ಟೀಂ ಇಂಡಿಯಾವನ್ನು ಎದುರಿಸಲಿದೆ. ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೇರಿದಂತೆ ಒಟ್ಟು 8 ತಂಡಗಳು ಪಾಲ್ಗೊಳ್ಳಲಿದ್ದು ಜುಲೈ 23ರಂದು ಲಾರ್ಡ್ಸ್'ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಟೂರ್ನಿಯಲ್ಲಿ ಭಾಗವಹಿಸುವ ಇತರ ತಂಡಗಳೆಂದರೆ, ಇಂಗ್ಲೆಂಡ್, ನ್ಯೂಜಿಲ್ಯಾಂಡ್, ಶ್ರೀಲಂಕಾ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್'ಇಂಡಿಸ್ ಮತ್ತು ಪಾಕಿಸ್ತಾನ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.