
ಮೆಲ್ಬೋರ್ನ್(ನ.16): ದಕ್ಷಿಣ ಆಫ್ರಿಕಾ ತಂಡದ ನಾಯಕ ಫ್ಲಾಫ್ ಡುಪ್ಲೆಸಿಸ್, ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸಿದ ಆರೋಪ ಎದುರಿಸುತ್ತಿದ್ದಾರೆ.
ಡುಪ್ಲೆಸಿಸ್ ತಮ್ಮ ಬಾಯಿಂದ ಬಿಳಿ ಬಣ್ಣದ ವಸ್ತುವೊಂದನ್ನು ತೆಗೆದು ಚೆಂಡಿಗೆ ಹಚ್ಚುತ್ತಿರುವುದು ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ಈ ದೃಶ್ಯಾವಳಿಯನ್ನು ಪರಿಶೀಲಿಸಲಾಗಿದ್ದು ಇದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನಿಯಮ ಉಲ್ಲಂಘನೆಯಾಗಿದೆ ಐಸಿಸಿ ವಕ್ತಾರರೊಬ್ಬರು ಹೇಳಿದ್ದಾರೆ.
2013ರಲ್ಲಿ ಪಾಕಿಸ್ತಾನ ವಿರುದ್ಧದ 2ನೇ ಟೆಸ್ಟ್ ಪಂದ್ಯದ ವೇಳೆ ಡುಪ್ಲೆಸಿಸ್ ಇದೇ ರೀತಿ ಚೆಂಡನ್ನು ವಿರೂಪಗೊಳಿಸಿದ ಆರೋಪಕ್ಕೆ ಗುರಿಯಾಗಿದ್ದರಲ್ಲದೆ, ಪಂದ್ಯದ ಶೇ.50ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಲಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.