ಟೆಸ್ಟ್ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್ ಪಟ್ಟಿ ಪ್ರಕಟ-ನಂ.1 ಪಟ್ಟ ಯಾರಿಗೆ?

Published : Aug 13, 2018, 06:40 PM ISTUpdated : Sep 09, 2018, 08:33 PM IST
ಟೆಸ್ಟ್ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್ ಪಟ್ಟಿ ಪ್ರಕಟ-ನಂ.1 ಪಟ್ಟ ಯಾರಿಗೆ?

ಸಾರಾಂಶ

ಲಾರ್ಡ್ಸ್ ಟೆಸ್ಟ್ ಪಂದ್ಯದ ಬಳಿಕ ಐಸಿಸಿ ನೂತನ ಟೆಸ್ಟ್ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಗೊಳಿಸಿದೆ. ನೂತನ ರ‍್ಯಾಂಕಿಂಗ್ ಪಟ್ಟಿ ಹಲವು ಬದಲಾವಣೆಗಳಾಗಿವೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಯಾವ ಸ್ಥಾನದಲ್ಲಿದ್ದಾರೆ. ಇಲ್ಲಿದೆ.

ದುಬೈ(ಆ.13): ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಗೊಳಿಸಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಟೆಸ್ಟ್ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ ನಾಯಕ ವಿರಾಟ್ ಕೊಹ್ಲಿಗೆ ನಿರಾಸೆಯಾಗಿದೆ.

ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಹಿಂದಿಕ್ಕಿ ಮೊದಲ ಸ್ಥಾನ ಅಲಂಕರಿಸಿದ್ದರು.  ಆದರೆ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡೋ ಮೂಲಕ ಅಗ್ರಸ್ಥಾನ ಕಳೆದುಕೊಂಡಿದ್ದಾರೆ.

ನೂತನ ಐಸಿಸಿ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಟೀವ್ ಸ್ಮಿತ್ ಮತ್ತೆ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.  ಇಂಗ್ಲೆಂಡ್ ನಾಯಕ ಜೋ ರೂಟ್ 3ನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚೇತೇಶ್ವರ್ ಪೂಜಾರ 6ನೇ ಸ್ಥಾನ ಅಲಂಕರಿಸಿದ್ದಾರೆ. ಟಾಪ್ ಟೆನ್ ಟೆಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ವಿರಾಟ್ ಕೊಹ್ಲಿ ಹಾಗೂ ಪೂಜಾರ ಸ್ಥಾನ ಪಡೆದಿದ್ದಾರೆ. 

ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಟೀಂ ಇಂಡಿಯಾದ ರವೀಂದ್ರ ಜಡೇಜಾ 3 ಹಾಗೂ ಆರ್ ಅಶ್ವಿನ್ 5 ನೇ ಸ್ಥಾನ ಅಲಂಕರಿಸಿದ ಸಾಧನೆ ಮಾಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಲ್ಲು ಅರ್ಜುನ್ ಭೇಟಿ ಮಾಡಿ ಭರ್ಜರಿ ಉಡುಗೊರೆ ನೀಡಿದ ಆರ್‌ಸಿಬಿ ಸ್ಟಾರ್ ವೆಂಕಟೇಶ್ ಐಯ್ಯರ್
IPL Playoffs: ಒಂದೇ ಸ್ಥಾನ, 4 ತಂಡಗಳ ಫೈಟ್! ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್?