ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ಕೊಹ್ಲಿಯೇ ಕಿಂಗ್

By Web DeskFirst Published Sep 13, 2018, 11:28 AM IST
Highlights

ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-4 ಅಂತರದಲ್ಲಿ ಪರಾಭವಗೊಂಡಿದೆ.ಆದರೆ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ವಿಶೇಷ ಅಂದ್ರೆ ಇಂಗ್ಲೆಂಡ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಬ್ಯಾಟ್ಸ್’ಮನ್‌ಗಳ ಶ್ರೇಯಾಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ನವದೆಹಲಿ (ಸೆ.13): ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-4 ಅಂತರದಲ್ಲಿ ಪರಾಭವಗೊಂಡಿದೆ.ಆದರೆ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ವಿಶೇಷ ಅಂದ್ರೆ ಇಂಗ್ಲೆಂಡ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಬ್ಯಾಟ್ಸ್’ಮನ್‌ಗಳ ಶ್ರೇಯಾಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್ ಸರಣಿ ಆರಂಭಕ್ಕೂ ಮೊದಲು ಕೊಹ್ಲಿ, ಆಸ್ಟ್ರೇಲಿಯಾದ ನಿಷೇಧಿತ ಆಟಗಾರ ಸ್ಟೀವ್ ಸ್ಮಿತ್‌ಗಿಂತ 27 ಅಂಕ ಹಿಂದಿದ್ದರು. ಆದರೆ, ಸರಣಿಯಲ್ಲಿ ಸ್ಮಿತ್‌ರನ್ನು ಹಿಂದಿಕ್ಕಿದ ವಿರಾಟ್ ಸದ್ಯ 930 ಅಂಕದೊಂದಿಗೆ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್ ವಿರುದ್ಧ 59.3 ಸರಾಸರಿಯಲ್ಲಿ 593 ರನ್ ಸಿಡಿಸಿರುವುದರಿಂದ ಕೊಹ್ಲಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೆ, ಟೀಂ ಇಂಡಿಯಾ ಆಂಗ್ಲರ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವಲ್ಲಿ ವಿಫಲವಾಗಿದೆ.

click me!