
ದುಬೈ(ಮೇ.24): ಮುಂದಿನ ತಿಂಗಳಿಂದ ಇಂಗ್ಲೆಂಡ್'ನಲ್ಲಿ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಗಳಿಗೆ ಬಿಗಿ ಭದ್ರತೆ ಒದಗಿಸಲಾಗುವುದು ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹೇಳಿದೆ.
ಸೋಮವಾರ ಮ್ಯಾಂಚೆಸ್ಟರ್'ನಲ್ಲಿ ಉಗ್ರರ ದಾಳಿಯಿಂದಾಗಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ ಉಗ್ರರು 22 ಮಂದಿ ನಾಗರೀಕರನ್ನು ಹತ್ಯೆ ಮಾಡಿದ್ದರು. ಹೀಗಾಗಿ ಕ್ರಿಕೆಟ್ ಪಂದ್ಯಾವಳಿ ನಡೆಯುವ ಸ್ಥಳಗಳಲ್ಲಿ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗುವುದು ಎಂದು ಐಸಿಸಿ ಅಧಿಕಾರಿಗಳು ಹೇಳಿದ್ದಾರೆ.
ಜೂನ್ 1 ರಿಂದ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ಮ್ಯಾಂಚೆಸ್ಟರ್'ನಲ್ಲಿ ನಡೆಯುವುದಿಲ್ಲ. ಆದರೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಲಂಡನ್, ಬರ್ಮಿಂಗ್'ಹ್ಯಾಮ್ ಮತ್ತು ಕಾರ್ಡಿಫ್'ಗಳಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ.
ಇದರ ಜೊತೆಗೆ ಮಹಿಳಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂನ್ 24 ರಿಂದ ಜುಲೈ 23ರವರೆಗೆ ನಡೆಯಲಿದೆ. ಈ ಎರಡೂ ಟೂರ್ನಿಯ ಭದ್ರತೆ ಬಗ್ಗೆ ಈಗಾಗಲೇ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವ ಕ್ರಿಕೆಟ್ ಮಂಡಳಿ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.