
ದುಬೈ(ಫೆ.02): ಐಸಿಸಿ ಕ್ರಿಕೆಟ್ ಮಹಿಳಾ ಏಕದಿನ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತದ ಸ್ಮೃತಿ ಮಂದನಾ ಮೊದಲ ಸ್ಥಾನ ಅಲಂಕರಿಸಿದ್ದಾರೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ 196 ರನ್ ಸಿಡಿಸಿರುವ ಮಂದನಾ 98ರ ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ಭಾರತ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತ್ತು.
ಇದನ್ನೂ ಓದಿ: ವಿಶ್ವಕಪ್ 2019: ಸೆಮಿಫೈನಲ್ ಪ್ರವೇಶಿಸಬಲ್ಲ ಬಲಿಷ್ಠ 4 ತಂಡಗಳು ಯಾವುವು?
ಸ್ಮೃತಿ ಮಂದನಾ 751 ರೇಟಿಂಗ್ ಪಾಯಿಂಟ್‌ನೊಂದಿಗೆ ಮೊದಲ ಸ್ಥಾನಕ್ಕೇರಿದ್ದಾರೆ. ಇನ್ನು ಆಸ್ಟ್ರೇಲಿಯಾದ ಎಲ್ಲಿಸ್ ಪೆರಿ ಹಾಗೂ ಮೆಗ್ ಲ್ಯಾನಿಂಗ್ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ. 2018ರಲ್ಲಿ ಮಂದನಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ವರ್ಷದ ಮಹಿಳಾ ಕ್ರಿಕೆಟ್ ಆಟಗಾರ್ತಿ ಹಾಗೂ ವರ್ಷದ ಏಕದಿನ ಮಹಿಳಾ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದರು. ಇನ್ನು ಟಾಪ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮಿಥಾಲಿ ರಾಜ್ ಕೂಡ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ 2019: ಟೀಂ ಇಂಡಿಯಾ ಮುಂದಿರುವ 3 ಚಾಲೆಂಜ್!
ಐಸಿಸಿ ಮಹಿಳಾ ರ‍್ಯಾಂಕಿಂಗ್
| ರ್ಯಾಂಕ್ | ಆಟಗಾರ್ತಿ | ರೇಟಿಂಗ್ |
| 1 | ಸ್ಮೃತಿ ಮಂದನಾ | 751 |
| 2 | ಎಲ್ಲಿಸ್ ಪೆರಿ | 681 |
| 3 | ಮೆಗ್ ಲ್ಯಾನಿಂಗ್ | 675 |
| 4 | ಅ್ಯಮಿ ಸ್ಯಾಟರ್‌ವೈಟ್ | 669 |
| 5 | ಮಿಥಾಲಿ ರಾಜ್ | 669 |
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.