ಟಿ20 ವಿಶ್ವ​ಕಪ್‌: 'A' ಗುಂಪಿನಲ್ಲಿ ಸ್ಥಾನ ಪಡೆದ ಟೀಂ ಇಂಡಿಯಾ

By Web DeskFirst Published Sep 8, 2019, 6:00 PM IST
Highlights

ಮುಂಬರುವ ಐಸಿಸಿ ಮಹಿಳಾ ವಿಶ್ವಕಪ್ ಟಿ20 ಟೂರ್ನಿಗೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಲಿವೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ನವದೆಹಲಿ[ಸೆ.08]: 2020ರ ಐಸಿಸಿ ಮಹಿಳಾ ಟಿ-20 ವಿಶ್ವಕಪ್‌ನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಕಠಿಣ ಸವಾಲು ಎದುರಾಗಲಿ​ದೆ. 

Here's how the groups for the shape up 👇 pic.twitter.com/O2V9UqTSHd

— T20 World Cup (@T20WorldCup)

ಫೆ.21ರಿಂದ ಮಾ.8, 2020ರ ವರೆಗೆ ಆಸ್ಪ್ರೇಲಿಯಾದಲ್ಲಿ ನಡೆಯುವ ವಿಶ್ವಕಪ್‌ಗೆ ತಂಡಗಳ ವಿಂಗಡಣೆಯಾಗಿದ್ದು, ಭಾರತ ‘ಎ’ ಗುಂಪಿನಲ್ಲಿ ಸ್ಥಾನ ಪಡೆ​ದಿ​ದೆ. ​‘ಎ​’ ಗುಂಪಿನಲ್ಲಿ ಬಲಿಷ್ಠ ಆಸ್ಪ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳಿದ್ದು, ಶ್ರೀಲಂಕಾ ಹಾಗೂ ಬಾಂಗ್ಲಾದೇಶವೂ ಸ್ಥಾನ ಪಡೆದಿವೆ.  ಇನ್ನು ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ, ವೆಸ್ಟ್‌ ಇಂಡೀಸ್‌, ಪಾಕಿಸ್ತಾನ ಹಾಗೂ ಥಾಯ್ಲೆಂಡ್‌ ತಂಡಗಳು ‘ಬಿ’ ಗುಂಪಿನಲ್ಲಿವೆ.

T20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಮಿಥಾಲಿ ರಾಜ್

2020ರ ಫೆಬ್ರವರಿ 21ರಂದು ಆತಿಥೇಯ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಕಾದಾಡಲಿವೆ. ವಿಶ್ವ ಮಹಿಳೆಯರ ದಿನವಾದ ಮಾರ್ಚ್ 08ರಂದು ಫೈನಲ್ ಪ೦ದ್ಯ ನಡೆಯಲಿದ್ದು, ಮೆಲ್ಬೋರ್ನ್ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಲಿದೆ.
 

click me!