ಐಸಿಸಿ ಮಹಿಳಾ ರ‍್ಯಾಂಕಿಂಗ್ ಪ್ರಕಟ : 2ನೇ ಸ್ಥಾನಕ್ಕೇರಿದ ಜೆಮಿಮಾ

Published : Feb 13, 2019, 10:08 AM ISTUpdated : Feb 13, 2019, 11:03 AM IST
ಐಸಿಸಿ ಮಹಿಳಾ ರ‍್ಯಾಂಕಿಂಗ್ ಪ್ರಕಟ : 2ನೇ ಸ್ಥಾನಕ್ಕೇರಿದ ಜೆಮಿಮಾ

ಸಾರಾಂಶ

ಐಸಿಸಿ ಮಹಿಳಾ ಟಿ20 ರ‍್ಯಾಂಕಿಂಗ್ ಪ್ರಕಟಗೊಂಡಿದೆ. ಭಾರತದ ಜೆಮಿಮಾ ರೋಡ್ರಿಗಾಸ್ 2ನೇ ಸ್ಥಾನ ಅಲಂಕರಿಸಿದ್ದಾರೆ. ಐಸಿಸಿ ಬಿಡುಗಡೆ ಮಾಡಿದ ನೂತನ ರ‍್ಯಾಂಕಿಂಗ್ ಪಟ್ಟಿ ವಿವರ ಇಲ್ಲಿದೆ.  

ದುಬೈ(ಫೆ.13): ಭಾರತದ ಮಹಿಳಾ ಕ್ರಿಕೆಟ್‌ ತಂಡದ ಯುವ ಆಟಗಾರ್ತಿ ಜೆಮಿಮಾ ರೋಡ್ರಿಗಾಸ್‌, ಮಂಗಳವಾರ ಪ್ರಕಟಗೊಂಡ ಐಸಿಸಿ ಟಿ20 ಬ್ಯಾಟರ್‌ಗಳ ನೂತನ ಪಟ್ಟಿಯಲ್ಲಿ 4 ಸ್ಥಾನಗಳ ಏರಿಕೆ ಕಂಡು 2ನೇ ಸ್ಥಾನ ಪಡೆದಿದ್ದಾರೆ. ಅತ್ಯುತ್ತಮ ಲಯದಲ್ಲಿರುವ ಸ್ಮೃತಿ ಮಂಧನಾ ಸಹ 4 ಸ್ಥಾನಗಳ ಏರಿಕೆ ಕಂಡಿದ್ದು 6ನೇ ಸ್ಥಾನದಲ್ಲಿದ್ದಾರೆ. 

ಇದನ್ನೂ ಓದಿ: ಆಸೀಸ್‌ ವಿರುದ್ಧ ತಮಾಷೆ: ವೀರೂಗೆ ಹೇಡನ್‌ ಎಚ್ಚರಿಕೆ!

ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಪಿನ್ನರ್‌ ರಾಧಾ ಯಾದವ್‌ 10ನೇ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ತಂಡಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿ ಮುಂದುವರಿದಿದೆ. ಮಹಿಳಾ ಏಕದಿನ ಮಾದರಿಯಲ್ಲಿ ಸ್ಮೃತಿ ಮಂಧನಾ ಬ್ಯಾಟರ್ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇದನ್ನೂ ಓದಿ: ಪ್ರೊ ಕಬಡ್ಡಿ v/s ನ್ಯೂ ಕಬಡ್ಡಿ- ಗೊಂದಲದಲ್ಲಿ ಆಟಗಾರರು!

ಹಿರಿಯ ಆಟಗಾರ್ತಿ ಮಿಥಾಲಿ ರಾಜ್ 5ನೇ ಸ್ಥಾನದಲ್ಲಿದ್ದಾರೆ. ಏಕದಿನ ಬೌಲಿಂಗ್‌ನಲ್ಲಿ ಜುಲನ್ ಗೋಸ್ವಾಮಿ 4ನೇ ಸ್ಥಾನದಲ್ಲಿದ್ದರೆ, ಆಲ್ರೌಂಡರ್ ವಿಭಾಗದಲ್ಲಿ ಭಾರತ ದೀಪ್ತಿ ಶರ್ಮಾ 4ನೇ ಸ್ಥಾನ ಅಲಂಕರಿಸಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?