
ದುಬೈ(ಅ.10): ಐಸಿಸಿ ಮಹಿಳಾ ಚಾಂಪಿಯನ್'ಶಿಪ್'ನ 2ನೇ ಆವೃತ್ತಿ 2017ರಿಂದ 2020ರ ತನಕ ನಡೆಯಲಿದ್ದು, ಮೊದಲ ಸುತ್ತಿನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ.
2018ರ ಫೆ.5ರಿಂದ 10ರ ತನಕ ದ.ಆಫ್ರಿಕಾ ಪ್ರವಾಸದಲ್ಲಿ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. 2014ರಿಂದ16ರ ತನಕ ನಡೆದ ಮೊದಲ ಆವೃತ್ತಿ ಮಾದರಿಯಲ್ಲೇ 2ನೇ ಆವೃತ್ತಿ ಸಹ ನಡೆಯಲಿದೆ.
ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಹಾಗೂ ವೆಸ್ಟ್‌ಇಂಡೀಸ್ ಒಳಗೊಂಡಂತೆ ಎಲ್ಲಾ 8 ತಂಡಗಳು ತವರಿನಲ್ಲಿ ಅಥವಾ ತವರಿನಾಚೆ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಪರಸ್ಪರ ಎದುರಾಗಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.