ಇಲ್ಲಿದೆ 2019ರ ಕ್ರಿಕೆಟ್ ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ

Published : Apr 27, 2018, 07:28 PM ISTUpdated : Apr 27, 2018, 07:39 PM IST
ಇಲ್ಲಿದೆ 2019ರ ಕ್ರಿಕೆಟ್ ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ

ಸಾರಾಂಶ

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟಗೊಂಡಿದ್ದು ಮೇ 30ರಿಂದ ಜುಲೈ 14ರವರೆಗೆ ನಡೆಯುವ ಕ್ರಿಕೆಟ್ ಮಹಾಜಾತ್ರೆಗೆ ಇಂಗ್ಲೆಂಡ್ ಆತಿಥ್ಯ ವಹಿಸಲಿದೆ. ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಇನ್ನು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಈ ಬಾರಿ ವಿಶ್ವಕಪ್’ಗೆ ಅರ್ಹತೆ ಗಿಟ್ಟಿಸಿರುವ ಆಫ್ಘಾನಿಸ್ತಾನದೊಂದಿಗೆ ಕಾದಾಡಲಿದೆ.

ದುಬೈ[ಏ.27]: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟಗೊಂಡಿದ್ದು ಮೇ 30ರಿಂದ ಜುಲೈ 14ರವರೆಗೆ ನಡೆಯುವ ಕ್ರಿಕೆಟ್ ಮಹಾಜಾತ್ರೆಗೆ ಇಂಗ್ಲೆಂಡ್ ಆತಿಥ್ಯ ವಹಿಸಲಿದೆ. ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಇನ್ನು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಈ ಬಾರಿ ವಿಶ್ವಕಪ್’ಗೆ ಅರ್ಹತೆಗಿಟ್ಟಿಸಿರುವ ಆಫ್ಘಾನಿಸ್ತಾನದೊಂದಿಗೆ ಕಾದಾಡಲಿದೆ.
1983 ಹಾಗೂ 2011ರ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಭಾರತ ತಂಡವು ಜೂನ್ 5ರಂದು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಇನ್ನು ಜೂನ್ 16ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಮ್ಯಾಂಚೆಸ್ಟರ್’ನಲ್ಲಿ ಸೆಣಸಲಿದೆ. 
ವಿಶ್ವಕಪ್’ನಲ್ಲಿ ಒಟ್ಟು 48 ಪಂದ್ಯಗಳು ಜರುಗಲಿದ್ದು, ಗುಂಪು ಹಂತದಲ್ಲಿ 45 ಪಂದ್ಯಗಳು ನಡೆಯಲಿವೆ. ಪ್ರತಿ ತಂಡವು ಗುಂಪು ಹಂತದಲ್ಲಿ 9 ಪಂದ್ಯಗಳನ್ನು ಆಡಲಿವೆ. ಅಂಕಪಟ್ಟಿಯಲ್ಲಿ ಅಗ್ರ 4 ಸ್ಥಾನಗಳಿಸುವ ತಂಡಗಳು ಸೆಮಿಫೖನಲ್ ಪ್ರವೇಶಿಸಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌
ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು