ಕ್ರಿಕೆಟ್ ವಿಶ್ವಕಪ್: ಭಾರತಕ್ಕೆ ಆಫ್ರಿಕಾ ಮೊದಲ ಎದುರಾಳಿ

Published : Apr 25, 2018, 11:31 AM ISTUpdated : Apr 25, 2018, 03:26 PM IST
ಕ್ರಿಕೆಟ್ ವಿಶ್ವಕಪ್: ಭಾರತಕ್ಕೆ ಆಫ್ರಿಕಾ ಮೊದಲ ಎದುರಾಳಿ

ಸಾರಾಂಶ

ಈ ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿ ಪ್ರಕಾರ ಜೂನ್ 2ಕ್ಕೆ ಭಾರತದ ಮೊದಲ ಪಂದ್ಯ ನಿಗದಿಯಾಗಿತ್ತು. ಇಂಗ್ಲೆಂಡ್‌'ನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಮೇ 30ರಿಂದ ಆರಂಭಗೊಳ್ಳಲಿದ್ದು ಜುಲೈ 14ರವರೆಗೂ ನಡೆಯಲಿದೆ. ಐಸಿಸಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ದಿನಾಂಕ ಬದಲಿಸುವ ನಿರ್ಧಾರ ಕೈಗೊಳ್ಳಲಾಯಿತು.

ದುಬೈ(ಏ.25): 2019ರ ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯ ವನ್ನು ಜೂನ್ 5ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿ ಪ್ರಕಾರ ಜೂನ್ 2ಕ್ಕೆ ಭಾರತದ ಮೊದಲ ಪಂದ್ಯ ನಿಗದಿಯಾಗಿತ್ತು. ಇಂಗ್ಲೆಂಡ್‌'ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಮೇ 30ರಿಂದ ಆರಂಭಗೊಳ್ಳಲಿದ್ದು ಜುಲೈ 14ರವರೆಗೂ ನಡೆಯಲಿದೆ. ಐಸಿಸಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ದಿನಾಂಕ ಬದಲಿಸುವ ನಿರ್ಧಾರ ಕೈಗೊಳ್ಳಲಾಯಿತು.

ಕಾರಣವೇನು?: ಲೋಧಾ ಸಮಿತಿ ಶಿಫಾರಸಿನ ಪ್ರಕಾರ, ಐಪಿಎಲ್ ಫೈನಲ್'ಗೂ ಭಾರತ ತಂಡದ ಅಂತಾರಾಷ್ಟ್ರೀಯ ಪಂದ್ಯಕ್ಕೂ ಕನಿಷ್ಠ 15 ದಿನಗಳ ಅಂತರವಿರಬೇಕು. 12ನೇ ಆವೃತ್ತಿಯ ಐಪಿಎಲ್ ಮಾರ್ಚ್ 29ಕ್ಕೆ ಆರಂಭಗೊಳ್ಳಲಿದ್ದು ಮೇ 19ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಭಾರತ ತನ್ನ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಜೂನ್ 5ಕ್ಕೂ ಮುನ್ನ ಆಡಲು ಸಾಧ್ಯವಿಲ್ಲ.

ಪಾಕಿಸ್ತಾನ ವಿರುದ್ಧ  ಜೂನ್ 16ಕ್ಕೆ ಪಂದ್ಯ:

ಇತ್ತೀಚಿನ ಕೆಲ ವರ್ಷಗಳಲ್ಲಿ ಐಸಿಸಿ ಪಂದ್ಯಾವಳಿಗಳು ಭಾರತ-ಪಾಕಿಸ್ತಾನ ಪಂದ್ಯದೊಂದಿಗೆ ಆರಂಭಗೊಳ್ಳುತ್ತಿತ್ತು. 2015ರ ಏಕದಿನ ವಿಶ್ವಕಪ್, 2017ರ ಚಾಂಪಿಯನ್ಸ್ ಟ್ರೋಫಿಗೆ ಭಾರತ-ಪಾಕ್ ಮುಖಾಮುಖಿ ಅದ್ಧೂರಿ ಆರಂಭ ಒದಗಿಸಿತ್ತು. ಆದರೆ ಈ ಬಾರಿ ತಂಡಗಳು ಮೊದಲ ಪಂದ್ಯದಲ್ಲಿ ಎದುರಾಗುತ್ತಿಲ್ಲ. 2019ರ ವಿಶ್ವಕಪ್‌'ನಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳಲಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿದೆ. ಬದ್ಧವೈರಿಗಳಾದ ಭಾರತ-ಪಾಕಿಸ್ತಾನ ಜೂನ್ 16ರಂದು ಮ್ಯಾಂಚೆಸ್ಟರ್ ನಲ್ಲಿ ಸೆಣಸಲಿವೆ. ವಿಶ್ವಕಪ್‌'ನಲ್ಲಿ ಪಾಕ್ ವಿರುದ್ಧ ಸೋಲದ ಭಾರತ, ತನ್ನ ದಾಖಲೆ ಉಳಿಸಿಕೊಳ್ಳಲು ಹೋರಾಡಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈನಲ್ಲಿ ಮೆಸ್ಸಿ ಮೇನಿಯಾ! ಫುಟ್ಬಾಲ್‌ ಲೆಜೆಂಡ್‌ಗೆ 2011ರ ವಿಶ್ವಕಪ್ ಜೆರ್ಸಿ ಕೊಟ್ಟ ಸಚಿನ್
ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ