ನಿಗೂಢ ಸತ್ಯ ಹೊರಹಾಕಿದ ಮೇರಿ ಕೋಮ್

Published : Oct 06, 2016, 01:19 PM ISTUpdated : Apr 11, 2018, 12:55 PM IST
ನಿಗೂಢ ಸತ್ಯ ಹೊರಹಾಕಿದ ಮೇರಿ ಕೋಮ್

ಸಾರಾಂಶ

ನವದೆಹಲಿ(ಅ.06): ಭಾರತದ ಅಗ್ರ ಬಾಕ್ಸಿಂಗ್ ತಾರೆ ಮೇರಿ ಕೋಮ್ ತಮ್ಮ ಮಕ್ಕಳಿಗೆ ಬರೆದ ಪತ್ರವೊಂದರಲ್ಲಿ ತಾನೂ ವ್ಯಕ್ತಿಯೊಬ್ಬನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದೆ ಎಂಬ ಅಘಾತಕಾರಿ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

ಲೆಟ್ಸ್ ಟಾಕ್ ಎಬೋಟ್ ರೇಪ್ ಎಂಬ ಸಾಮಾಜಿಕ ಪ್ರಚಾರ ಕಾರ್ಯಕ್ರಮದ ಭಾಗವಾಗಿರುವ ಮೇರಿ ಕೋಮ್ ತಮ್ಮ ಮಕ್ಕಳಿಗೆ ಬರೆದ ಪತ್ರದಲ್ಲಿ ತಾನೂ ಒಮ್ಮೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ ಎಂದು ತಿಳಿಸಿದ್ದಾರೆ.

'ನಾನು ಬೆಳಗ್ಗೆ 8.30ಕ್ಕೆ ತರಬೇತಿಗೆಂದು ಆಟೋರಿಕ್ಷಾದಲ್ಲಿ ಹೋಗುತ್ತಿದ್ದೆ. ಒಮ್ಮೆ ಅಪರಿಚಿತ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆಯೇ ನನ್ನ ಮೈ ಮೇಲೆ ಕೈಹಾಕಿದ. ನನಗೆ ತುಂಬ ಸಿಟ್ಟು ಬಂತು. ನಾನು ಆತನನ್ನು ಆಟೋದಿಂದ ಹೊರ ತಳ್ಳಿ ಕಾಲಿನಲ್ಲಿದ್ದ ಚಪ್ಪಲಿಯನ್ನು ಕೈಗೆ ತೆಗೆದುಕೊಂಡೆ. ಆಗ ಆತ ತಪ್ಪಿಸಿಕೊಂಡು ಓಡಿಹೋದ. ಅದಾಗಲೇ ನಾನು ಕರಾಟೆ ಕಲಿತಿದ್ದರಿಂದ ನನಗೆ ಅದು ಸಹಾಯಕ್ಕೆ ಬಂತು' ಎಂದು ಐದು ಬಾರಿ ವಿಶ್ವಚಾಂಪಿಯನ್ ಆಗಿರುವ ಮೇರಿ ಕೋಮ್ ತಿಳಿಸಿದ್ದಾರೆ.

ನೀವು ಬೆಳೆದು ದೊಡ್ಡವರಾದ ಮೇಲೆ, ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದನ್ನು ನೋಡಿದರೆ ತಕ್ಷಣ ಅವರ ನೆರವಿಗೆ ಹೋಗಿ ಎಂದು ತಮ್ಮ ಇಬ್ಬರು ಮಕ್ಕಳಿಗೆ(9 ವರ್ಷ, 3 ವರ್ಷ) ಮೇರಿ ಕೋಮ್ ಕಿವಿಮಾತು ಹೇಳಿದ್ದಾರೆ.

2012ರ ಲಂಡನ್ ಒಲಿಂಪಿಕ್'ನಲ್ಲಿ 51 ಕೆಜಿ ವಿಭಾಗದಲ್ಲಿ ಮೇರಿ ಕೋಮ್ ಕಂಚಿನ ಪದಕವನ್ನು ಗೆದ್ದಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ind vs pak ಪಂದ್ಯದಲ್ಲಿ ಭಾವನಾತ್ಮಕ ಕ್ಷಣ: ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ VIDEO
Ind Vs Pak: ನಿಮ್ಮ ವಯಸ್ಸೆಷ್ಟು? ಎಂದು ಕೇಳಿದ ಪಾಕಿಸ್ತಾನಿ ಫ್ಯಾನ್‌! ಭಾರತೀಯ ಅಜ್ಜಿ ಕೊಟ್ಟ ಖಡಕ್ ಉತ್ತರಕ್ಕೆ ಬಾಯಿ ಮುಚ್ಚಿಕೊಂಡ!