
ರಾಂಚಿ[ಮಾ.08]: ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಆರಂಭ ಪಡೆದಿದ್ದು, ಕೊನೆಗೂ ಮೊದಲ ವಿಕೆಟ್ ಕಬಳಿಸುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಆ್ಯರೋನ್ ಫಿಂಚ್ 93 ರನ್ ಬಾರಿಸಿ ಕುಲ್ದೀಪ್ ಯಾದವ್’ಗೆ ವಿಕೆಟ್ ಒಪ್ಪಿಸಿದ್ದಾರೆ.
ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್’ಗೆ ಆ್ಯರೋನ್ ಫಿಂಚ್-ಉಸ್ಮಾನ್ ಖ್ವಾಜಾ ಜೋಡಿ 193 ರನ್’ಗಳ ಜತೆಯಾಟವಾಡುವ ಮೂಲಕ ಭಾರತೀಯರನ್ನು ಇನ್ನಿಲ್ಲದಂತೆ ಕಾಡಿದರು. ಶತಕದತ್ತ ಮುನ್ನುಗ್ಗುತ್ತಿದ್ದ ಫಿಂಚ್ 99 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 93 ರನ್ ಬಾರಿಸಿ ಕಲ್ದೀಪ್ ಬೌಲಿಂಗ್’ನಲ್ಲಿ ಎಲ್’ಬಿ ಬಲೆಗೆ ಬಿದ್ದರು.
ಈಗಾಗಲೇ ಮೊದಲೆರಡು ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆಸ್ಟ್ರೇಲಿಯಾ 34 ಓವರ್ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 204 ರನ್ ಬಾರಿಸಿದ್ದು, ಖ್ವಾಜಾ 94 ಹಾಗೂ ಮ್ಯಾಕ್ಸ್’ವೆಲ್ 9 ರನ್ ಬಾರಿಸಿ ಕ್ರೀಸ್’ನಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.