ಲಂಚ್ ಬಳಿಕ ಆಂಗ್ಲರ 5ನೇ ವಿಕೆಟ್ ಪತನ

Published : Aug 30, 2018, 06:34 PM ISTUpdated : Sep 09, 2018, 09:04 PM IST
ಲಂಚ್ ಬಳಿಕ ಆಂಗ್ಲರ 5ನೇ ವಿಕೆಟ್ ಪತನ

ಸಾರಾಂಶ

ಮೊಹಮ್ಮದ್ ಶಮಿ ಬೌಲಿಂಗ್’ನಲ್ಲಿ ಜೋಸ್ ಬಟ್ಲರ್ ವಿಕೆಟ್ ಒಪ್ಪಿಸಿದ್ದಾರೆ. ಇದೀಗ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ.

ಸೌತಾಂಪ್ಟನ್[ಆ.30]: ಇಂಗ್ಲೆಂಡ್ ಬ್ಯಾಟ್ಸ್’ಮನ್’ಗಳ ಪೆವಿಲಿಯನ್ ಪರೇಡ್ ಮುಂದುವರೆದಿದ್ದು, ಇಂಗ್ಲೆಂಡ್ ತಂಡದ 5ನೇ ವಿಕೆಟ್ ಪತನಗೊಂಡಿದೆ.

ಊಟದ ವಿರಾಮಕ್ಕೂ ಮುನ್ನವೇ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಗ್ಲೆಂಡ್, ಲಂಚ್ ಬ್ರೇಕ್ ಬಳಿಕ ಮತ್ತೆ ಆಘಾತಕ್ಕೆ ಒಳಗಾಗಿದೆ. ಮೊಹಮ್ಮದ್ ಶಮಿ ಬೌಲಿಂಗ್’ನಲ್ಲಿ ಜೋಸ್ ಬಟ್ಲರ್ ವಿಕೆಟ್ ಒಪ್ಪಿಸಿದ್ದಾರೆ. ಇದೀಗ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ.

5ನೇ ವಿಕೆಟ್’ಗೆ ಬಟ್ಲರ್-ಸ್ಟೋಕ್ಸ್ ಜೋಡಿ 33 ರನ್’ಗಳ ಜತೆಯಾಟವಾಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಆಸರೆಯಾಗುವ ಪ್ರಯತ್ನ ನಡೆಸಿತು. ಕೇವಲ 24 ಎಸೆತಗಳಲ್ಲಿ 21 ರನ್ ಗಳಿಸಿದ್ದ ಬಟ್ಲರ್ ಕೊಹ್ಲಿ ಹಿಡಿದ ಅದ್ಭುತ ಕ್ಯಾಚ್’ಗೆ ಪೆವಿಲಿಯನ್ ಸೇರಿದರು.  ಇದೀಗ ಕ್ರೀಸ್’ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಮೊಯಿನ್ ಅಲಿ ಬ್ಯಾಟಿಂಗ್ ಮುಂದುವರೆಸಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India vs New Zealand: ಕೊಹ್ಲಿ ಕ್ಲಾಸಿಕ್‌ ಇನ್ನಿಂಗ್ಸ್‌, ನ್ಯೂಜಿಲೆಂಡ್‌ ವಿರುದ್ಧ 4 ವಿಕೆಟ್‌ ಗೆಲುವು ಕಂಡ ಟೀಮ್‌ ಇಂಡಿಯಾ
ಯಶ್‌ ದಯಾಳ್‌ ಬಳಿಕ ಮತ್ತೊಬ್ಬ ಆರ್‌ಸಿಬಿ ಪ್ಲೇಯರ್‌ ಸೋಶಿಯಲ್‌ ಮೀಡಿಯಾ ರಂಗಿನಾಟ ಬಯಲು..!