ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬಿಗಿ ಹಿಡಿತ-ಭಾರತಕ್ಕೆ ಸಂಕಟ

By Web DeskFirst Published Aug 11, 2018, 7:49 PM IST
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯ ಆಂಗ್ಲರತ್ತ ವಾಲುತ್ತಿದೆ. ಟೀಂ ಇಂಡಿಯಾ ಮೇಲುಗೈ ಸಾಧಿಸಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ತೃತೀಯ ದಿನದಾಟದ ಅಪ್‌ಡೇಟ್ಸ್ ಇಲ್ಲಿದೆ.

ಲಾರ್ಡ್ಸ್(ಆ.11):  ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿದೆ. ದ್ವಿತೀಯ ದಿನ ಬೌಲಿಂಗ್‌ನಲ್ಲಿ ಅಬ್ಬರಿಸಿದ ಇಂಗ್ಲೆಂಡ್, 3ನೇ ದಿನದಾಟದಲ್ಲಿ ಬ್ಯಾಟಿಂಗ್‌ನಲ್ಲಿ ಪರಾಕ್ರಮ ಮೆರೆದಿದೆ. ಆಂಗ್ಲರ ಅದ್ಬುತ ಬ್ಯಾಟಿಂಗ್ ಟೀಂ ಇಂಡಿಯಾಗೆ ಸಂಕಷ್ಟ ತಂದೊಡ್ಡಿದೆ.

ತೃತೀಯ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಆರಂಭದಲ್ಲೇ  ಕೆಟನ್ ಜೆನ್ನಿಂಗ್ಸ್ 11 ರನ್ ಸಿಡಿಸಿ ಔಟಾದರು. ಇನ್ನ ಹಿರಿಯ ಬ್ಯಾಟ್ಸ್‌ಮನ್ ಆಲಿಸ್ಟ್ರೈರ್ ಕುಕ್ 21 ರನ್‌ಗೆ ನಿರ್ಮಿಸಿದರು.

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಡೇವಿಡ್ ಮಲಾನ್ ಬದಲು ಅವಕಾಶ ಪಡೆದ ಯುವ ಬ್ಯಾಟ್ಸ್‌ಮನ್ ಒಲ್ಲಿ ಪೋಪ್ 28 ರನ್‌ ಕಾಣಿಕೆ ನೀಡಿ ನಿರ್ಗಮಿಸಿದರು.  ಎಚ್ಚರಿಕೆಯ ಹೋರಾಟಕ್ಕೆ ಮುಂದಾಗಿದ್ದ ನಾಯಕ ಜೋ ರೂಟ್ 19 ರನ್ ಸಿಡಿಸಿ ನಿರ್ಗಮಿಸಿದರು. ಈ ಮೂಲಕ ಇಂಗ್ಲೆಂಡ್ ಭೋಜನ ವಿರಾಮದ  ವೇಳೆ 89 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು.

2ನೇ ಸೆಶನ್ ಆರಂಭದಲ್ಲೇ ಜೋಸ್ ಬಟ್ಲರ್ 24 ರನ್ ಸಿಡಿಸಿ ಔಟಾದರರು. ಆದರೆ ಜಾನಿ ಬೈರಿಸ್ಟೋ ಹಾಗೂ ಕ್ರಿಸ್ ವೋಕ್ಸ್ ಜೊತೆಯಾಟದಿಂದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಬೈರಿಸ್ಟೋ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಸದ್ಯ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 192 ರನ್ ಸಿಡಿಸಿದೆ. ಈ ಮೂಲಕ 85 ರನ್ ಮುನ್ನಡೆ ಪಡೆದಿದೆ.

click me!