ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ರೋಚಕ ಟ್ವಿಸ್ಟ್- ಆಂಗ್ಲರ 4ನೇ ವಿಕೆಟ್ ಪತನ

By Web DeskFirst Published Aug 11, 2018, 5:35 PM IST
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಬೌಲರ್‌ಗಳು ಮೇಲುಗೈ ಸಾಧಿಸಿದ್ದಾರೆ. 2ನೇ ದಿನ ಇಂಗ್ಲೆಂಡ್  ವೇಗಿಗಳು ಆರ್ಭಟಿಸಿದ್ದರೆ, ಇದೀಗ ಭಾರತೀಯ ವೇಗಿಗಳು ಪ್ರಾಬಲ್ಯ ಸಾಧಿಸಿದ್ದಾರೆ. ತೃತೀಯ ದಿನದ ಅಪ್‌ಡೇಟ್ಸ್ ಇಲ್ಲಿದೆ.

ಲಾರ್ಡ್ಸ್(ಆ.11): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯ ಅಭಿಮಾನಿಗಳ ಕುತೂಹಲನ್ನ ಇಮ್ಮಡಿಗೊಳಿಸಿದೆ. ಟೀಂ ಇಂಡಿಯಾವನ್ನ 107 ರನ್‌ಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಇದೀಗ 4ನೇ ವಿಕೆಟ್ ಕಳೆದುಕೊಂಡಿದೆ.

ತೃತೀಯ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಆರಂಭದಲ್ಲೇ  ಕೆಟನ್ ಜೆನ್ನಿಂಗ್ಸ್ 11 ರನ್ ಸಿಡಿಸಿ ಔಟಾದರು. ಇನ್ನ ಹಿರಿಯ ಬ್ಯಾಟ್ಸ್‌ಮನ್ ಆಲಿಸ್ಟ್ರೈರ್ ಕುಕ್ 21 ರನ್‌ಗೆ ನಿರ್ಮಿಸಿದರು.

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಡೇವಿಡ್ ಮಲಾನ್ ಬದಲು ಅವಕಾಶ ಪಡೆದ ಯುವ ಬ್ಯಾಟ್ಸ್‌ಮನ್ ಒಲ್ಲಿ ಪೋಪ್ 28 ರನ್‌ ಕಾಣಿಕೆ ನೀಡಿ ನಿರ್ಗಮಿಸಿದರು.  ಎಚ್ಚರಿಕೆಯ ಹೋರಾಟಕ್ಕೆ ಮುಂದಾಗಿದ್ದ ನಾಯಕ ಜೋ ರೂಟ್ 19 ರನ್ ಸಿಡಿಸಿ ನಿರ್ಗಮಿಸಿದರು. ಈ ಮೂಲಕ ಇಂಗ್ಲೆಂಡ್ 89 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದೆ. 

ಮೊಹಮ್ಮದ್ ಶಮಿ 2 ವಿಕೆಟ್ ಕಬಳಿಸಿದರೆ, ಇಶಾಂತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ 1 ವಿಕಟೆ ಕಬಳಿಸಿದ್ದಾರೆ.  ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ 89 ರನ್‌ಗೆ 4 ವಿಕೆಟ್ ಕಳೆದುಕೊಂಡಿದೆ. ಮೊದಲ ಇನ್ನಿಂಗ್ಸ್ ಮುನ್ನಡೆಗೆ ಇಂಗ್ಲೆಂಡ್‌ಗೆ 18 ರನ್ ಅವಶ್ಯಕತೆ ಇದೆ.

click me!