ನ್ಯೂಜಿಲೆಂಡ್ ಟೆಸ್ಟ್ ಗೂ ಮುನ್ನ ಟೀಂ ಇಂಡಿಯಾಗೆ ಶಾಕ್- ಕಟ್ ಆಯ್ತು ಶೇ. 35ರಷ್ಟು ಸಂಬಳ

Roopa Hegde   | ANI
Published : Nov 18, 2026, 08:47 PM IST
Team India players Salary

ಸಾರಾಂಶ

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಐಸಿಸಿ ಟೀಂ ಇಂಡಿಯಾ ಆಟಗಾರರ ಸಂಬಳಕ್ಕೆ ಕತ್ತರಿ ಹಾಕಿದೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಹಿನ್ನಡೆಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೀಮ್ ಇಂಡಿಯಾ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಆಟಗಾರರ ಪಂದ್ಯ ಶುಲ್ಕದಲ್ಲಿ ಶೇ. 35 ರಷ್ಟು ಕಡಿತಗೊಳಿಸಿದೆ. ನ್ಯೂಜಿಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಓವರ್ ದರದಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ..

ಪ್ರತಿ ಓವರ್ ಗೆ ಶೇ. 5 ರಷ್ಟು ದಂಡ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯವನ್ನು ನವೆಂಬರ್ 15 ರಂದು ಮೌಂಟ್ ಮೌಂಗನುಯಿಯಲ್ಲಿ ನಡೆಸಲಾಗಿತ್ತು. ಐಸಿಸಿಯ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ, ನಿಧಾನಗತಿಯ ಓವರ್ ರೇಟ್ಗೆ ದಂಡ ವಿಧಿಸಲಾಗುತ್ತದೆ. ನಿಗದಿತ ಸಮಯಕ್ಕಿಂತ ಕಡಿಮೆ ಉಳಿದ ಪ್ರತಿ ಓವರ್ಗೆ ಆಟಗಾರರ ಪಂದ್ಯ ಶುಲ್ಕದ ಶೇ. 5ರಷ್ಟು ದಂಡ ವಿಧಿಸುವ ನಿಯಮವಿದೆ. ಗರಿಷ್ಠ ದಂಡದ ಪ್ರಮಾಣ ಶೇ. 50ರಷ್ಟಿದೆ. ಭಾರತ ತಂಡ ಏಳು ಓವರ್ಗಳನ್ನು ಕಡಿಮೆ ಮಾಡಿದ್ದರಿಂದ ಒಟ್ಟು ಶೇ. 35ರಷ್ಟು ದಂಡ ವಿಧಿಸಲಾಗಿದೆ. ಶ್ರೇಯಸ್ ಅಯ್ಯರ್ ಈ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ.

ಶಿಕ್ಷೆ ಒಪ್ಪಿಕೊಂಡ ನಾಯಕ ಶ್ರೇಯಸ್ ಅಯ್ಯರ್

ಈ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ನಾಯಕ ಶ್ರೇಯಸ್ ಅಯ್ಯರ್, ಮ್ಯಾಚ್ ರೆಫರಿ ರಂಜನ್ ಮದುಗಲೆ ವಿಧಿಸಿದ ದಂಡವನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಔಪಚಾರಿಕ ವಿಚಾರಣೆಯ ಅಗತ್ಯ ಬೀಳಲಿಲ್ಲ.

3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ

ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಗೆಲುವಿನೊಂದಿಗೆ ಸರಣಿಯನ್ನು ಮುಗಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲಿ ವಿಕೆಟ್ಗಳನ್ನು ಕಳೆದುಕೊಂಡರೂ ಮಧ್ಯಮ ಕ್ರಮಾಂಕದ ಆಟಗಾರರು ತಂಡಕ್ಕೆ ಆಸರೆಯಾದರು. ಇಶಾನ್ ಕಿಶನ್ ಮತ್ತು ಅಕ್ಷರ್ ಪಟೇಲ್ ತಲಾ 46 ರನ್ ಗಳಿಸಿದರು. ಪರಿಣಾಮ ಭಾರತ 209 ರನ್ಗಳ ಮೊತ್ತ ಕಲೆಹಾಕಿತು.

ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿತು. ವೇಗದ ಬೌಲರ್ಗಳು ಪ್ರಮುಖ ವಿಕೆಟ್ಗಳನ್ನು ಕಬಳಿಸುವ ಮೂಲಕ ಕಿವೀಸ್ ತಂಡವನ್ನು 187 ರನ್ಗಳಿಗೆ ಕಟ್ಟಿಹಾಕಿದರು. ಈ ಮೂಲಕ ಭಾರತ 22 ರನ್ಗಳ ಜಯ ಸಾಧಿಸಿತು. ಸರಣಿಯನ್ನು 3-1 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಇದೀಗ ಭಾರತ ತಂಡ ನವೆಂಬರ್ 19ರಿಂದ ವೆಲ್ಲಿಂಗ್ಟನ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಸರಣಿ ಆರಂಭಕ್ಕೂ ಮುನ್ನವೇ ಐಸಿಸಿ ವಿಧಿಸಿರುವ ಈ ದಂಡ ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಭಾರೀ ಮೊತ್ತಕ್ಕೆ ಶಾರುಖ್‌ ಖಾನ್‌ನ KKR ಟೀಮ್‌ನಲ್ಲಿನ ಅರ್ಧ ಪಾಲನ್ನು ಮಾರಾಟ ಮಾಡಲಿರುವ ನಟಿ ಜೂಹಿ ಚಾವ್ಲಾ ಗಂಡ
ಐಪಿಎಲ್ 2027 ಹರಾಜಿಗೂ ಮುನ್ನ RCB ಈ ಗೇಮ್‌ ಚೇಂಜರ್ ಆಟಗಾರನನ್ನು ಕೈಬಿಟ್ಟಿದ್ದೇಕೆ? ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಇರ್ಫಾನ್ ಪಠಾಣ್