#INDvSA 2ನೇ ಟಿ20: ರೋಹಿತ್ ದಾಖಲೆ ಮುರಿದ ಕೊಹ್ಲಿ!

Published : Sep 18, 2019, 10:37 PM IST
#INDvSA 2ನೇ ಟಿ20:  ರೋಹಿತ್ ದಾಖಲೆ ಮುರಿದ ಕೊಹ್ಲಿ!

ಸಾರಾಂಶ

ಸೌತ್ ಆಫ್ರಿಕಾ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಅಬ್ಬರಿಸಿದ ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲಿ ಸರದಾರನಾಗಿರುವ ರೋಹಿತ್ ಶರ್ಮಾ ದಾಖಲೆನ್ನು ಕೊಹ್ಲಿ ಮುರಿದಿದ್ದಾರೆ.

ಮೊಹಾಲಿ(ಸೆ.18): ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ನಾಯಕ ವಿರಾಟ್ ಕೊಹ್ಲಿ ಅಜೇಯ 72 ರನ್ ಸಿಡಿಸೋ ಮೂಲಕ ಭಾರತ ಇನ್ನೂ 1 ಓವರ್ ಬಾಕಿ ಇರುವಂತೆ ಗೆಲುವಿನ ದಡ ಸೇರಿತು. ಮೊಹಾಲಿಯಲ್ಲಿ ವಿರಾಟ್ ಕೊಹ್ಲಿ ಅಬ್ಬರಕ್ಕೆ ಟಿ20ಯಲ್ಲಿ ದಾಖಲೆ ನಿರ್ಮಾಣವಾಗಿದೆ. ಇಷ್ಟೇ ಅಲ್ಲ ರೋಹಿತ್ ಹೆಸರಿನಲ್ಲಿದ್ದ ರೆಕಾರ್ಡ್ ಇದೀಗ ಕೊಹ್ಲಿ ಪಾಲಾಗಿದೆ.

ಇದನ್ನೂ ಓದಿ: INDvSA ಕೊಹ್ಲಿ ಅರ್ಧಶತಕ; ಮೊಹಾಲಿಯಲ್ಲಿ ನಲಿದಾಡಿದ ಭಾರತ!

2ನೇ ಚುಟುಕು ಸಮರದಲ್ಲಿ ಕೊಹ್ಲಿ 52 ಎಸೆತದಲ್ಲಿ 4 ಬೌಂಡರಿ ಹಾಗೂ 3  ಸಿಕ್ಸರ್ ನೆರವಿನಿಂದ ಅಜೇಯ 72 ರನ್ ಚಚ್ಚಿದರು. ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಈ ಅದ್ಭುತ ಬ್ಯಾಟಿಂಗ್ ಪ್ರದರ್ಶನದ  ಮೂಲಕ ರೋಹಿತ್ ಶರ್ಮಾ ದಾಖಲೆ ಮುರಿದಿದ್ದಾರೆ.  ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸಿಡಿಸಿದ ಬ್ಯಾಟ್ಸ್‌ಮನ್ ಅನ್ನೋ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಕೊಹ್ಲಿ ಇದೀಗ 2440 ರನ್ ಸಿಡಿಸಿದ್ದಾರೆ. ರೋಹಿತ್ ಶರ್ಮಾಗಿಂತ 6 ರನ್‌ಗಳಿಂದ ಮುಂದಿದ್ದಾರೆ.

ಇದನ್ನೂ ಓದಿ: 2020ರ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಮುಂದಿರುವ ಸವಾಲುಗಳೇನು..?

ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸರದಾರರು:
2440 ವಿರಾಟ್ ಕೊಹ್ಲಿ
2434 ರೋಹಿತ್ ಶರ್ಮಾ
2283 ಮಾರ್ಟಿನ್ ಗಪ್ಟಿಲ್
2263 ಶೋಯಿಬ್ ಮಲ್ಲಿಕ್
2140 ಬ್ರೆಂಡನ್ ಮೆಕ್ಕಲಂ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!