ವೆಸ್ಟ್ ಇಂಡೀಸ್ ಪಡೆಯನ್ನು ಅನಾಯಾಸವಾಗಿ ಬಗ್ಗುಬಡಿದ ಟೀಂ ಇಂಡಿಯಾ

By Web DeskFirst Published Oct 6, 2018, 3:02 PM IST
Highlights

ಭಾರತೀಯ ಬೌಲರ್’ಗಳ ಸಂಘಟಿತ ಪ್ರದರ್ಶನಕ್ಕೆ ತತ್ತರಿಸಿದ ವೆಸ್ಟ್ ಇಂಡೀಸ್ ಇನ್ನಿಂಗ್ಸ್ ಹಾಗೂ 272 ರನ್’ಗಳ ಹೀನಾಯ ಸೋಲು ಕಂಡಿದೆ. ಈ ಗೆಲುವಿನೊಂದಿಗೆ ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ರಾಜ್’ಕೋಟ್[ಅ.06]: ಭಾರತೀಯ ಬೌಲರ್’ಗಳ ಸಂಘಟಿತ ಪ್ರದರ್ಶನಕ್ಕೆ ತತ್ತರಿಸಿದ ವೆಸ್ಟ್ ಇಂಡೀಸ್ ಇನ್ನಿಂಗ್ಸ್ ಹಾಗೂ 272 ರನ್’ಗಳ ಹೀನಾಯ ಸೋಲು ಕಂಡಿದೆ. ಈ ಗೆಲುವಿನೊಂದಿಗೆ ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಭಾರತ ಮೊದಲ ಇನ್ನಿಂಗ್ಸ್’ನಲ್ಲಿ 649 ರನ್’ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದಕ್ಕುತ್ತರವಾಗಿ ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್’ನಲ್ಲಿ 181 ಹಾಗೂ ಎರಡನೇ ಇನ್ನಿಂಗ್ಸ್’ನಲ್ಲಿ 196 ರನ್’ಗಳಿಸಲಷ್ಟೇ ಶಕ್ತವಾಯಿತು. ಎರಡನೇ ಇನ್ನಿಂಗ್ಸ್’ನಲ್ಲಿ ಕಿರಾನ್ ಪೋವೆಲ್ 83 ರನ್ ಬಾರಿಸಿದ್ದು ಬಿಟ್ಟರೆ, ಉಳಿದ ಯಾವ ಬ್ಯಾಟ್ಸ್’ಮನ್ ಕೂಡಾ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ನಡೆಸಲಿಲ್ಲ. ಇದೀಗ ಇನ್ನೂ 2 ದಿನ ಬಾಕಿ ಇರುವಂತೆಯೇ ವಿರಾಟ್ ಪಡೆ ಗೆಲುವಿನ ಕೇಕೆ ಹಾಕಿದೆ.

ಕುಲ್ದೀಪ್ ಯಾದವ್ 5, ರವೀಂದ್ರ ಜಡೇಜಾ 3 ಹಾಗೂ ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆಯುವುದರೊಂದಿಗೆ ವಿಂಡೀಸ್ ಬ್ಯಾಟ್ಸ್’ಗಳ ಹೆಡೆಮುರಿ ಕಟ್ಟಿದರು. 

ಇದಕ್ಕೂ ಮೊದಲು ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಪೃಥ್ವಿ ಶಾ, ನಾಯಕ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬಾರಿಸಿದ ಭರ್ಜರಿ ಶತಕಗಳ ನೆರವಿನಿಂದ ಬರೋಬ್ಬರಿ 9 ವಿಕೆಟ್ ನಷ್ಟಕ್ಕೆ 649 ರನ್ ಬಾರಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. 

ಇದೀಗ ಎರಡನೇ ಟೆಸ್ಟ್ ಪಂದ್ಯ ಹೈದರಾಬಾದಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ಅಕ್ಟೋಬರ್ 12ರಿಂದ ಆರಂಭವಾಗಲಿದೆ. 
 

click me!