
ರಾಜ್’ಕೋಟ್[ಅ.04]: ಮುಂಬೈ ಯುವ ಪ್ರತಿಭೆ ಪೃಥ್ವಿ ಶಾ ಪದಾರ್ಪಣ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಅಂತರಾಷ್ಟ್ರೀಯ ವೃತ್ತಿ ಜೀವನವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಸಫಲವಾಗಿದ್ದಾರೆ. ಈ ಮೂಲಕ ಪದಾರ್ಪಣ ಪಂದ್ಯದಲ್ಲೇ ಶತಕ ಸಿಡಿಸಿ ಭಾರತದ ಅತಿ ಕಿರಿಯ ಆಟಗಾರ ಎನ್ನುವ ಗೌರವಕ್ಕೆ ಪೃಥ್ವಿ ಪಾತ್ರರಾಗಿದ್ದಾರೆ.
ಏಕದಿನ ಮಾದರಿಯಲ್ಲಿ ಬ್ಯಾಟ್ ಬೀಸಿದ ಪೃಥ್ವಿ ಶಾ ಕೇವಲ 99 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು. ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಮುಂಬೈನ ಯುವ ಪ್ರತಿಭೆ ಹಲವು ಅಪರೂಪದ ದಾಖಲೆಗಳನ್ನು ನಿರ್ಮಿಸಿದ್ದಾರೆ. ಪದಾರ್ಪಣ ಪಂದ್ಯದಲ್ಲಿ ಅತಿವೇಗವಾಗಿ ಶತಕ ಸಿಡಿಸಿದ ವಿಶ್ವದ ಮೂರನೇ ಕ್ರಿಕೆಟಿಗ, ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 15ನೇ ಬ್ಯಾಟ್ಸ್’ಮನ್ ಎನ್ನುವ ಹಿರಿಮೆಯು ಪೃಥ್ವಿ ಶಾ ಪಾಲಾಗಿದೆ.
ಕ್ರಿಕೆಟ್’ನಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪೃಥ್ವಿ ರಣಜಿ ಕ್ರಿಕೆಟ್, ದುಲಿಪ್ ಟ್ರೋಫಿ ಬಳಿಕ ಇದೀಗ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್’ನಲ್ಲಿ ತಾವಾಡಿದ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಶಿಖರ್ ಧವನ್ ಬಳಿಕ ಪದಾರ್ಪಣ ಪಂದ್ಯದಲ್ಲೇ ಶತಕ ಸಿಡಿಸಿದ ಎರಡನೇ ಬ್ಯಾಟ್ಸ್’ಮನ್ ಎನ್ನುವ ಕೀರ್ತಿಗೆ ಶಾ ಪಾತ್ರರಾಗಿದ್ದಾರೆ.
ಇದೀಗ ಭಾರತ ಒಂದು ವಿಕೆಟ್ ನಷ್ಟಕ್ಕೆ 174 ರನ್ ಬಾರಿಸಿದ್ದು ಶಾ 101* ಹಾಗೂ ಪೂಜಾರ 67* ಇನ್ನಿಂಗ್ಸ್ ಮುಂದುವರೆಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.