
ರಾಜ್’ಕೋಟ್[ಅ.05]: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಶತಕ ಸಿಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್’ನಲ್ಲಿ ವಿರಾಟ್ ಕೊಹ್ಲಿ 24ನೇ ಶತಕ ಸಿಡಿಸಿ ಸಂಭ್ರಮಿಸಿದರು. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ರಿಶಭ್ ಪಂತ್ ಕೇವಲ 8 ರನ್’ಗಳಿಂದ ಶತಕ ವಂಚಿತರಾದರು.
ಮೊದಲ ದಿನದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 364 ರನ್ ಬಾರಿಸಿದ್ದ ಭಾರತ ಎರಡನೇ ದಿನವೂ ಉತ್ತಮ ಆರಂಭ ಪಡೆಯಿತು. ಮೊದಲ ದಿನವೇ 71 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಎಚ್ಚರಿಕೆಯ ಆಟಕ್ಕೆ ಮುಂದಾದರೆ, ರಿಶಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಕೇವಲ 84 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಮನಮೋಹಕ ಸಿಕ್ಸರ್’ಗಳ ನೆರವಿನಿಂದ 92 ರನ್ ಚಚ್ಚಿ ದೇವೇಂದ್ರ ಬಿಶೂಗೆ ವಿಕೆಟ್ ಒಪ್ಪಿಸಿದರು. 5ನೇ ವಿಕೆಟ್’ಗೆ ಪಂತ್-ವಿರಾಟ್ ಜೋಡಿ 133 ರನ್ ಕಲೆಹಾಕಿತು.
ಒಂದು ಕಡೆ ಪಂತ್ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದರೆ, ಮತ್ತೊಂದೆಡೆ ಎಚ್ಚರಿಯ ಆಟವಾಡಿದ ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. ಈ ಶತಕದೊಂದಿಗೆ ಕ್ರಿಕೆಟ್ ದಂತಕತೆ ಡಾನ್ ಬ್ರಾಡ್ಮನ್ ಬಳಿಕ ಅತಿ ಕಡಿಮೆ ಇನ್ನಿಂಗ್ಸ್’ಗಳಲ್ಲಿ ವೇಗವಾಗಿ ಶತಕ ಪೂರೈಸಿದ ಎರಡನೇ ಬ್ಯಾಟ್ಸ್’ಮನ್ ಎನ್ನುವ ಕೀರ್ತಿಗೂ ಭಾಜನರಾದರು. ಬ್ರಾಡ್ಮನ್ 66 ಇನ್ನಿಂಗ್ಸ್’ಗಳಲ್ಲಿ 24 ಶತಕ ಪೂರೈಸಿದರೆ, ವಿರಾಟ್ 123 ಇನ್ನಿಂಗ್ಸ್’ಗಳಲ್ಲಿ 24 ಸೆಂಚುರಿ ಬಾರಿಸಿದ್ದಾರೆ. ಈ ಮೊದಲು ಸಚಿನ್ 125 ಇನ್ನಿಂಗ್ಸ್’ಗಳಲ್ಲಿ ಈ ಸಾಧನೆ ಮಾಡಿದ್ದರು.
ಇದೀಗ ಊಟದ ವಿರಾಮದ ವೇಳೆಗೆ 5 ವಿಕೆಟ್ ನಷ್ಟಕ್ಕೆ 506 ರನ್ ಬಾರಿಸಿದ್ದು, ಕೊಹ್ಲಿ 120 ಹಾಗೂ ಜಡೇಜಾ 19 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.