
ಸಿಯಾಚಿನ್(ಆ.15): ದೇಶದೆಲ್ಲೆಡೆ 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಭಾರತೀಯ ಸೇನೆ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಎಂ.ಎಸ್.ಧೋನಿಗೆ ಸ್ಮರಣೀಯವಾಗಿದೆ. ಕ್ರಿಕೆಟ್‌ನಿಂದ ಬ್ರೇಕ್ ತೆಗೆದುಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ಜೊತೆ ಸೇವೆ ಸಲ್ಲಿಸುತ್ತಿರುವ ಧೋನಿ, ಸ್ವಾತಂತ್ರ್ಯ ದಿನಾಚರಣೆಗಾಗಿ ವಿಶ್ವದ ಅತ್ಯಂತ ಅಪಾಯಕಾರಿ ಸಿಯಾಚಿನ್‌ನ ಗ್ಲೇಸಿಯರ್‌ಗೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ಬೂಟ್ ಪಾಲಿಶ್ ಮಾಡಿದ ಸಾವಿರಾರು ಕೋಟಿ ಒಡೆಯ ಧೋನಿ..!
ಸಮುದ್ರ ಮಟ್ಟದಿಂದ 22,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಭಾರತ ಹಾಗೂ ಪಾಕಿಸ್ತಾನ ಗಡಿ ಭಾಗವನ್ನು ಹೊಂದಿಕೊಂಡಿದೆ. ಹಿಮಚ್ಚಾದಿತ ಪ್ರದೇಶದಲ್ಲಿ ಭಾರತೀಯ ಯೋಧರು ಗಡಿ ಕಾಯುತ್ತಿದ್ದಾರೆ. ಇದು ವಿಶ್ವದ ಅತ್ಯಂತ ಅಪಯಕಾರಿ ಯುದ್ಧಭೂಮಿ ಎಂದೇ ಹೆಸರುವಾಸಿಯಾಗಿದೆ. ಇದೀಗ ಇದೇ ಸಿಯಾಚಿನ್‌ನ ಗ್ಲೇಸಿಯರ್‌ಗೆ ಧೋನಿ ಭೇಟಿ ನೀಡುತ್ತಿದ್ದಾರೆ. ಇಲ್ಲಿ ಧ್ವಜಾರೋಹಣ ನೇರವೇರಿಸಲಿರುವ ಧೋನಿ, ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ವಾರದೊಳಗೆ ಕಾಶ್ಮೀರ ಸಮಸ್ಯೆ ಬಗೆಹರಿಸಿದ MSD
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹಿಂದೆ ಸರಿದಿರುವ ಧೋನಿ ಜುಲೈ 31 ರಂದು ಟೆರಿಟೋರಿಯಲ್ ಆರ್ಮಿ 106 ಬೆಟಾಲಿಯನ್(ಪ್ಯಾರ) ಸೇರಿಕೊಂಡಿದ್ದಾರೆ. ಜಮ್ಮ ಮತ್ತು ಕಾಶ್ಮೀರದ ಕಣಿವೆ ರಾಜ್ಯದಲ್ಲಿ ಧೋನಿ ಸೈನಿಕರ ಜೊತೆ ಗಸ್ತು ತಿರುಗುತ್ತಾ ಸೇವೆ ಸಲ್ಲಿಸುತ್ತಿದ್ದಾರೆ. ಆಗಸ್ಟ್ 15ರ ವರೆಗೆ ಸೇನೆ ಜೊತೆ ಸೇವೆ ಸಲ್ಲಿಸಲಿದ್ದಾರೆ. ಇಂದು(ಆ.15) ಸಿಯಾನ್ ಭೇಟಿ ಬಳಿಕ ಧೋನಿ ಸೇವೆ ಅಂತ್ಯವಾಗಲಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ತಲೆ ಎತ್ತಲಿದೆ ಧೋನಿ ಕ್ರಿಕೆಟ್ ಅಕಾಡಮಿ!
ಅತ್ಯಂತ ಎತ್ತರ ಪ್ರದೇಶ ಹಾಗೂ ಕಠಿಣ ಸಂದರ್ಭಗಳಲ್ಲಿ ಸೈನಿಕರು ದೇಶ ರಕ್ಷಣೆ ಮಾಡುತ್ತಾರೆ. ಈ ಕುರಿತು ಧೋನಿ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಸಿಯಾಚಿನ್ ವಾರ್ ಮೆಮೋರಿಯಲ್‌ಗೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.