ಮೈಸೂರಲ್ಲಿ ಭಾರತ ಎ -ಇಂಗ್ಲೆಂಡ್ ಲಯನ್ಸ್ ಅನಧಿಕೃತ ಟೆಸ್ಟ್

Published : Feb 13, 2019, 08:47 AM IST
ಮೈಸೂರಲ್ಲಿ ಭಾರತ ಎ -ಇಂಗ್ಲೆಂಡ್ ಲಯನ್ಸ್ ಅನಧಿಕೃತ ಟೆಸ್ಟ್

ಸಾರಾಂಶ

ಕೆ.ಎಲ್.ರಾಹುಲ್ ನಾಯಕತ್ವದ ಭಾರತ ಎ ತಂಡ ಇಂದಿನಿಂದ ಮೈಸೂರಿನಲ್ಲಿ ಅನಧಿಕೃತ ಟೆಸ್ಟ್ ಪಂದ್ಯ ಆಡಲಿದೆ. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೊದಲ ಪಂದ್ಯವನ್ನ ಡ್ರಾ ಮಾಡಿಕೊಂಡಿದ್ದ ಭಾರತ ಎ ಇದೀಗ 2ನೇ ಪಂದ್ಯದಲ್ಲಿ ಗೆಲುವಿನ ವಿಶ್ವಾಸದಲ್ಲಿದೆ.

ಮೈಸೂರು(ಫೆ.13): ಇಲ್ಲಿನ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ಫೆ.13 ರಿಂದ 16ರವರೆಗೆ ಭಾರತ ‘ಎ’ ಮತ್ತು ಇಂಗ್ಲೆಂಡ್‌ ಲಯನ್ಸ್‌ ನಡುವೆ 2ನೇ ಅನಧಿಕೃತ ಟೆಸ್ಟ್‌ ಪಂದ್ಯ ನಡೆಯಲಿದೆ. ಕೇರಳದ ವೈನಾಡ್‌ನಲ್ಲಿ ನಡೆದಿದ್ದ ಮೊದಲ ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು. 

ಇದನ್ನೂ ಓದಿ: 2019ರ ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟಿಸಿದ ಶೇನ್ ವಾರ್ನ್!

ಸರಣಿಯ 2ನೇ ಹಾಗೂ ಕೊನೆಯ 4 ದಿನಗಳ ಟೆಸ್ಟ್‌ ಪಂದ ಇದಾಗಿದ್ದು, ಭಾರತ ‘ಎ’ ತಂಡವನ್ನು ಕನ್ನಡಿಗ ಕೆ.ಎಲ್‌.ರಾಹುಲ್‌ ಮುನ್ನಡೆಸಲಿದ್ದಾರೆ. ಪ್ರಿಯಾಂಕ್‌ ಪಾಂಚಾಲ್‌, ಅಭಿಮನ್ಯು ಈಶ್ವರನ್‌, ಕೆ.ಎಸ್‌.ಭರತ್‌, ಶಾರ್ದೂಲ್‌ ಠಾಕೂರ್‌, ಸವ್‌ದೀಪ್‌ ಸೈನಿಯಂತಹ ಯುವ ಪ್ರತಿಭೆಗಳು ಭಾರತ ‘ಎ’ ತಂಡದಲ್ಲಿದ್ದಾರೆ. ಇಂಗ್ಲೆಂಡ್‌ ಲಯನ್ಸ್‌ ತಂಡವನ್ನು ಸ್ಯಾಮ್‌ ಬಿಲ್ಲಿಂಗ್ಸ್‌ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: ರೋಹಿತ್ ಶರ್ಮಾ ಮುದ್ದು ಮಗಳ ವಿಡಿಯೋ ವೈರಲ್ !

ಉಚಿತ ಪ್ರವೇಶ:ಪಂದ್ಯ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಗ್ಲೇಡ್ಸ್‌ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?