
ಕೊಲ್ಕತ್ತಾ(ಅ.01): ತವರಿನಲ್ಲಿ 250ನೇ ಟೆಸ್ಟ್ ಆಡುತ್ತಿರುವ ಟೀಮ್ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್ನಲ್ಲಿ 316 ರನ್ಗಳಿಗೆ ಆಲೌಟ್ ಆಗಿದೆ. ಇನ್ನು ಮೊದಲನೇ ಇನ್ನಿಂಗ್ಸ್ ಆರಂಭಿಸಿದ ಕಿವೀಸ್ ಆರಂಭಿಕ ಆಘಾತ ಅನುಭವಿಸಿದೆ.
ಮೊದಲ ದಿನದಂತ್ಯಕ್ಕೆ 7 ವಿಕೆಟ್ ಕಳ್ಕೊಂಡು 239ರನ್ ಮಾಡಿದ್ದ ಭಾರತೀಯರು, ಇಂದು ವೇಗವಾಗಿ ಬ್ಯಾಟ್ ಬೀಸಿದರು. ಅದರಲ್ಲೂ ವೃದ್ಧಿಮಾನ್ ಸಾಹಾ ಅಜೇಯ 54ರನ್ ಸಿಡಿಸಿ ಗಮನ ಸೆಳೆದರು. ಇನ್ನು ಜಡ್ಡು ಹಾಗೂ ಶಮಿ ಕೂಡ ತಲಾ 14ರನ್ ಮಾಡಿದರು. ಕಿವೀಸ್ ಪರ ಮ್ಯಾಟ್ ಹೆನ್ರಿ 3 ವಿಕೆಟ್ ಉರುಳಿಸಿದರು.
ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ಕಿವೀಸ್ ಆರಂಭಿಕ ಆಘಾತ ಅನುಭವಿಸಿದ್ದು, 23 ರನ್ ಕಲೆ ಹಾಕುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಭರ್ಜರಿ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರೆ, ಶಮಿ-ಜಡೇಜಾ ಒಂದು ವಿಕೆಟ್ ಉರುಳಿಸಿದರು. ಸದ್ಯದ ವರದಿ ಬಂದಾಗ ಕಿವೀಸ್ 85 ರನ್ ಗೆ 4 ವಿಕೆಟ್ ಕಳೆದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.