ಏಷ್ಯಾಕಪ್ ಫೈನಲ್: ಭಾರತ ವಿರುದ್ಧ ಬಾಂಗ್ಲಾದೇಶ ದಿಟ್ಟ ಹೋರಾಟ!

Published : Sep 28, 2018, 05:37 PM IST
ಏಷ್ಯಾಕಪ್ ಫೈನಲ್: ಭಾರತ ವಿರುದ್ಧ ಬಾಂಗ್ಲಾದೇಶ ದಿಟ್ಟ ಹೋರಾಟ!

ಸಾರಾಂಶ

ಭಾರತ ವಿರುದ್ಧದ  ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಆರಂಭಿಕ ಮೇಲುಗೈ ಸಾಧಿಸಿದೆ. ಪ್ರಶಸ್ತಿಗಾಗಿ ಹೋರಾಟ ನಡೆಸುತ್ತಿರುವ ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ಹೇಗಿದೆ? ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

ದುಬೈ(ಸೆ.28): ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಇಳಿದಿರುವ ಬಾಂಗ್ಲಾದೇಶ ದಿಟ್ಟ ಹೋರಾಟ ನೀಡುತ್ತಿದೆ. ಈ ಮೂಲಕ ಭಾರತದ ಆರಂಭಿಕ ಲೆಕ್ಕಾಚಾರ ಉಲ್ಟಾ ಆಗಿದೆ.

ಬಾಂಗ್ಲಾದೇಶ ತಂಡವನ್ನ ಬ್ಯಾಟಿಂಗ್ ಆಹ್ವಾನಿಸಿ ಆರಂಭಿಕ ಆಘಾತ ನೀಡಲು ಸಜ್ಜಾಗಿದ್ದ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಬಾಂಗ್ಲಾ ಆರಂಭಿಕರಾದ ಲಿಟ್ಟನ್ ದಾಸ್ ಹಾಗೂ ಮೆಹದಿ ಹಸನ್ ಅರ್ಧಶತಕದ ಜೊತೆಯಾಟ ನೀಡಿದ್ದಾರೆ.ಸದ್ಯ ಬಾಂಗ್ಲಾದೇಶ ವಿಕೆಟ್ ನಷ್ಟವಿಲ್ಲದೆ 59 ರನ್ ಸಿಡಿಸಿದೆ. 

 

 

ಫೈನಲ್ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಬದಲಾವಣೆ ಮಾಡಲಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ಶಿಖರ್ ಧವನ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಯುಜುವೆಂದ್ರ ಚೆಹಾಲ್ ಕಮ್ ಬ್ಯಾಕ್ ಮಾಡಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫುಟ್‌ಬಾಲ್ ಅಂಗಳಕ್ಕೆ ತಟ್ಟಿದ ಯುದ್ಧದ ಬಿಸಿ; ಅಮೆರಿಕದ ಮಣ್ಣಿನಲ್ಲಿ ಫಿಫಾ ವಿಶ್ವಕಪ್ ಆಡಲ್ಲ ಎಂದ ಇರಾನ್?
T20 World Cup 2026: ಭಾರತ-ಇಂಗ್ಲೆಂಡ್ ಸೆಮಿಫೈನಲ್ ಮ್ಯಾಚ್ ರದ್ದಾದ್ರೆ ಯಾರಿಗೆ ಸಿಗುತ್ತೆ ಫೈನಲ್ ಟಿಕೆಟ್? ಐಸಿಸಿ ನಿಯಮವೇನು?