ಐರ್ಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ

First Published Jun 29, 2018, 11:31 PM IST
Highlights

ಐರ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ  ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಬುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಸರಣಿ ಗೆಲುವಿನ ಸಂಭ್ರಮ ಆಚರಿಸಿದೆ. 2ನೇ ಪಂದ್ಯದಲ್ಲಿ ಭಾರತ ತಂಡದ ಪ್ರದರ್ಶನ ಹೇಗಿತ್ತು? ಇಲ್ಲಿದೆ ಹೈಲೈಟ್ಸ್

ಡಬ್ಲಿನ್(ಜೂ.29): ಐರ್ಲೆಂಡ್ ವಿರುದ್ಧದ 2ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ 143 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 2-0 ಅಂತರದಲ್ಲಿ ಭಾರತ ಟಿ20 ಸರಣಿಯಲ್ಲಿ ಕ್ಲೀನ್ ಸ್ಪೀಪ್ ಗೆಲುವಿನ ಮೂಲಕ ಸರಣಿ ವಶಪಡಿಸಿಕೊಂಡಿದೆ.

 

clinch the two match T20I series 2-0. pic.twitter.com/MaUa8lUVS8

— BCCI (@BCCI)

 

ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ನಿಗಧಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 213 ರನ್ ಸಿಡಿಸಿತು. 2ನೇ ಪಂದ್ಯದಲ್ಲೂ ನಾಯಕ ವಿರಾಟ್ ಕೊಹ್ಲಿ ಅಬ್ಬರಿಸಲಿಲ್ಲ. ಆದರೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಸುರೇಶ್ ರೈನಾ ಆರ್ಭಟದಿಂದ ಭಾರತ ಚೇತರಿಸಿಕೊಂಡಿತು. ರಾಹುಲ್ 36 ಎಸೆತದಲ್ಲಿ 3 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ನೆರವಿನಿಂದ 70 ರನ್ ಸಿಡಿಸಿ ಔಟಾದರು. 

ರಾಹುಲ್ ಬೆನ್ನಲ್ಲೇ ರೋಹಿತ್ ಶರ್ಮಾ ವಿಕೆಟ್ ಕೈಚೆಲ್ಲಿದರು. ರೋಹಿತ್ ಶೂನ್ಯ ಸುತ್ತಿದರೆ, ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿದ ಸುರೇಶ್ ರೈನಾ 45 ಎಸೆತದಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 69 ರನ್ ಸಿಡಿಸಿ ಪೆವಿಲಿಯನ್ ಸೇರಿದರು. ಅಂತಿಮ ಹಂತದಲ್ಲಿ ಕನ್ನಡಿಗ ಮನೀಶ್ ಪಾಂಡೆ ಅಜೇಯ 21 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ ಕೇವಲ 9 ಎಸೆತದಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 32 ರನ್ ಸಿಡಿಸಿದರು. ಈ ಮೂಲಕ ಭಾರತ 4 ವಿಕೆಟ್ ನಷ್ಟಕ್ಕೆ 213 ರನ್ ಸಿಡಿಸಿತು.

214 ರನ್ ಬೃಹತ್ ಟಾರ್ಗೆಟ್ ಪಡೆದ ಐರ್ಲೆಂಡ್, ರನ್ ಖಾತೆ ಆರಂಭಿಸೋ ಮೊದಲೇ ವಿಕೆಟ್ ಕಳೆದುಕೊಂಡಿತು. ಪೌಲ್ ಸ್ಟಿರ್ಲಿಂಗ್ ಶೂನ್ಯ ಸುತ್ತಿದರೆ, ಮೊದಲ ಪಂದ್ಯದಲ್ಲಿ 60 ರನ್ ಸಿಡಿಸಿದ್ದ ಜೇಮ್ ಶಾನನ್ 2 ರನ್ ಗಳಿಸಿ ನಿರ್ಗಮಿಸಿದರು. ವಿಲಿಯಮ್ ಪೊಟರ್‌ಫೀಲ್ಡ್ ಹಾಗೂ ಆಂಡಿ ಬಾಲ್ಬಿರ್ನೆ ಆಟ ನಡೆಯಲಿಲ್ಲ. ಕೆವಿನ್ ಒಬ್ರಿಯಾ ಸತತ 2ನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದರು.

ಭಾರತೀಯ ಮೂಲದ ಸಿಮಿ ಸಿಂಗ್ ಬಂದ ಹಾಗೆ ಪೆವಿಲಿಯನ್ ಸೇರಿಕೊಂಡರು. ನಾಯಕ ಗ್ಯಾರಿ ವಿಲ್ಸನ್ 15  ರನ್ ಕಾಣಿಕೆ ನೀಡಿದರು. ಇದು ಐರ್ಲೆಂಡ್ ಪರ ವೈಯುಕ್ತಿಕ ಗರಿಷ್ಠ ಸ್ಕೋರ್ ಅನ್ನೋ ಹೆಗ್ಗಳಿಕೆಗೆ ಪಾತ್ರವಾಯಿತು. ಜಾರ್ಜ್ ಡಾಕ್ರೆಲ್, ಸ್ಟುವರ್ಟ್ ಥಾಂಪ್ಸನ್ ಸೇರಿದಂತೆ ಐರ್ಲೆಂಡ್ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಐರ್ಲೆಂಡ್ 12.3  ಓವರ್‌ಗಳಲ್ಲಿ70 ರನ್‌ಗೆ ಆಲೌಟ್ ಆಯಿತು. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ 143 ರನ್‌ಗಳ ಗರಿಷ್ಠ ಗೆಲುವು ಸಾಧಿಸಿ ದಾಖಲೆ ಬರೆಯಿತು. ಇಷ್ಟೇ ಅಲ್ಲ, ಭರ್ಜರಿ ಗೆಲುವು ಸಾಧಿಸಿದ ಭಾರತ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತು. 

ದ್ವಿತೀಯ ಪಂದ್ಯದಲ್ಲಿ ಬೌಲಿಂಗ್ ಮಾಡಿದ ಭಾರತ ಐವರು ಬೌಲರ್‌ಗಳು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಯಜುವೇಂದ್ರ ಚೆಹಾಲ್ ಹಾಗೂ ಕುಲದೀಪ್ ಯಾದವ್ ತಲಾ 3, ಉಮೇಶ್ ಯಾದವ್  2 , ಹಾರ್ದಿಕ್ ಪಾಂಡ್ಯ, ಹಾಗೂ ಸಿದ್ದಾರ್ಥ್ ಕೌಲ್ ತಲಾ 1 ವಿಕೆಟ್ ಪಡೆದರು. 

click me!