ಮಲೇಷ್ಯಾ ವಿರುದ್ಧ ಭಾರತಕ್ಕೆ ಜಯ; ಲೀಗ್'ನಲ್ಲಿ ಭಾರತ ಟಾಪ್

Published : Oct 26, 2016, 04:28 PM ISTUpdated : Apr 11, 2018, 01:08 PM IST
ಮಲೇಷ್ಯಾ ವಿರುದ್ಧ ಭಾರತಕ್ಕೆ ಜಯ; ಲೀಗ್'ನಲ್ಲಿ ಭಾರತ ಟಾಪ್

ಸಾರಾಂಶ

ಆರು ರಾಷ್ಟ್ರಗಳ ಈ ಟೂರ್ನಿಯಲ್ಲಿ ಭಾರತ, ಮಲೇಷ್ಯಾ, ದಕ್ಷಿಣ ಕೊರಿಯಾ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ನಾಳೆ ಪಾಕಿಸ್ತಾನ ಮತ್ತು ಚೀನಾ, ಹಾಗೂ ದಕ್ಷಿಣ ಕೊರಿಯಾ ಮತ್ತು ಮಲೇಷ್ಯಾ ತಂಡಗಳು ಮುಖಾಮುಖಿಯಾಗಲಿವೆ.

ಮಲೇಷ್ಯಾ(ಅ. 26): ಭಾರತ ತಂಡ ಗೆಲುವಿನ ನಗೆಯೊಂದಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ರೌಂಡ್ ರಾಬಿನ್ ಲೀಗ್ ಹಂತವನ್ನು ಮುಕ್ತಾಯಗೊಳಿಸಿದೆ. ಇಂದು ನಡೆದ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಆತಿಥೇಯ ಮಲೇಷ್ಯಾ ವಿರುದ್ಧ ಭಾರತ ತಂಡ 2-1 ಗೋಲುಗಳಿಂದ ರೋಚಕ ಗೆಲುವು ಪಡೆಯಿತು. ಎರಡೂ ಗೋಲು ಗಳಿಸಿದ ರೂಪಿಂದರ್ ಪಾಲ್ ಸಿಂಗ್ ಭಾರತದ ಗೆಲುವಿನ ರೂವಾರಿಯಾದರು. ಪಂದ್ಯದ ಕೊನೆಯ ಕ್ಷಣಗಳಲ್ಲಿ ರೂಪಿಂದರ್ ವಿಜಯೀ ಗೋಲು ಗಳಿಸಿದರು.

ಭಾರತ ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಖಚಿತಪಡಿಸಿಕೊಂಡಿತು. ಆತಿಥೇಯ ಮಲೇಷ್ಯಾ ಸದ್ಯ 2ನೇ ಸ್ಥಾನದಲ್ಲಿದೆ. ಆರು ರಾಷ್ಟ್ರಗಳ ಈ ಟೂರ್ನಿಯಲ್ಲಿ ಭಾರತ, ಮಲೇಷ್ಯಾ, ದಕ್ಷಿಣ ಕೊರಿಯಾ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ನಾಳೆ ಪಾಕಿಸ್ತಾನ ಮತ್ತು ಚೀನಾ, ಹಾಗೂ ದಕ್ಷಿಣ ಕೊರಿಯಾ ಮತ್ತು ಮಲೇಷ್ಯಾ ತಂಡಗಳು ಮುಖಾಮುಖಿಯಾಗಲಿವೆ. ಆ ಪಂದ್ಯದ ಫಲಿತಾಂಶದ ಆಧಾರದ ಮೇಲೆ ಸೆಮಿಫೈನಲ್ ಹಣಾಹಣಿ ನಿಗದಿಯಾಗಲಿದೆ. ಮಲೇಷ್ಯಾ ವಿರುದ್ಧ ದಕ್ಷಿಣ ಕೊರಿಯಾವೇನಾದರೂ ಗೆದ್ದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್'ನಲ್ಲಿ ಮುಖಾಮುಖಿಯಾಗುವ ಸಾಧ್ಯತೆ ಇದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು, ಇಸ್ಲಾಮಾಬಾದ್‌ನಲ್ಲಿ ಕೋಲಾಹಲ
ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!