
ಶಾರ್ಜಾ(ಜ.20): ಕರ್ನಾಟಕದ ಸುನಿಲ್ ರಮೇಶ್ ಅವರ ಅಮೋಘ 93 ರನ್‌ಗಳ ಆಟದ ನೆರವಿನಿಂದ ಭಾರತ ತಂಡ 2018ರ ಅಂಧರ ಏಕದಿನ ಕ್ರಿಕೆಟ್ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ, ಸತತ 2ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 40 ಓವರ್‌ಗಳಲ್ಲಿ 308 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ 8 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. 2014ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಿಶ್ವಕಪ್ ಗೆದ್ದಿದ್ದ ಭಾರತ, 4 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.
ಅಭಿನಂದನೆಗಳ ಮಹಾಪೂರ
ಸತತ 2ನೇ ಬಾರಿಗೆ ವಿಶ್ವಕಪ್ ಗೆದ್ದು ದಾಖಲೆ ಬರೆದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟರ್‌ನಲ್ಲಿ ತಂಡದ ಸಾಧನೆಯನ್ನು ಕೊಂಡಾಡಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಗಣ್ಯರು ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸ್ಕೋರ್: ಪಾಕಿಸ್ತಾನ 40 ಓವರ್‌ಗಳಲ್ಲಿ 308/8 (ಮುನೀರ್ 57, ರಿಯಾಸತ್ 47), ಭಾರತ 38.4 ಓವರ್‌ಗಳಲ್ಲಿ 309/8 (ಸುನಿಲ್ 93, ಅಜಯ್ 62)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.