
ಇಂದೋರ್(ಅ.11): ನ್ಯೂಜಿಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ 321 ರನ್ಗಳ ಭರ್ಜರಿ ಜಯ ದಾಖಲಿಸಿದ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯನ್ನು ಕ್ಲಿನ್ ಸ್ವೀಪ್ ಮಾಡಿದೆ.
ಭಾರತ - ನ್ಯೂಜಿಲೆಂಡ್ 3ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 2ನೇ ಇನ್ನಿಂಗ್ಸ್ 153 ರನ್ ಗಳಿಗೆ ಸರ್ವ ಪತನ ಕಾಣುವ ಮೂಲಕ ಭಾರತದ ವಿರುದ್ಧ ಮೂರು ಪಂದ್ಯಗಳನ್ನು ಸೋತಿದೆ.
ಭಾರತ ಮೊದಲ ಇನ್ನಿಂಗ್ಸ್ 557/5 ಡಿಕ್ಲೇೡ ಮಾಡಿಕೊಂಡಿತು, ಎರಡನೇ ಇನ್ನಿಂಗ್ಸ್ ನಲ್ಲಿ 216/3 ಗಳಿಸಿತು, ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 299/10 ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ 153 ಆಲೌಟ್ ಆಯಿತು. ಈ ಮೂಲಕ ಭಾರತಕ್ಕೆ 321 ರನ್ಗಳ ಜಯ ಸಾಧಿಸಿತು.
ಎರಡನೇ ಇನ್ನಿಂಗ್ಸ್ ನಲ್ಲಿ ಜಡೇಜಾ ಭರ್ಜರಿ 7 ವಿಕೆಟ್ ಪಡೆಯುವ ಮೂಲಕ ಜಯದ ರೂವಾರಿಯಾದರು, ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ಗೆ 13 ವಿಕೆಟ್ ಪಡೆದುಕೊಂಡರು. ಪಂದ್ಯ ಶ್ರೇಷ್ಠ ಮತ್ತು ಪಂದ್ಯ ಪುರುಷ ಪ್ರಶಸ್ತಿಗಳು ರವಿಚಂದ್ರನ್ ಅಶ್ವಿನ್ ಪಾಲಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.