ಡಿಆರ್'ಎಸ್ ಅಳವಡಿಸಿಕೊಳ್ಳಲು ಬಿಸಿಸಿಐ ನಕಾರ

Published : Oct 14, 2016, 03:37 PM ISTUpdated : Apr 11, 2018, 12:59 PM IST
ಡಿಆರ್'ಎಸ್ ಅಳವಡಿಸಿಕೊಳ್ಳಲು ಬಿಸಿಸಿಐ ನಕಾರ

ಸಾರಾಂಶ

ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಈ ಬಗ್ಗೆ ಚರ್ಚೆ ನಡೆಯಲೆಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಶೀಘ್ರದಲ್ಲೇ ಇದು ಮಾನ್ಯವಾದರೆ, ಇದೇ ವರ್ಷಾಂತ್ಯಕ್ಕೆ ಭಾರತಕ್ಕೆ ಆಗಮಿಸಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆಗೆ ಡಿಆರ್‌ಎಸ್ ಅಳವಡಿಸಿಕೊಳ್ಳುವುದು ಸ್ಪಷ್ಟವಾಗಲಿದೆ.

ನವದೆಹಲಿ(ಅ.14): ವಿವಾದಾತ್ಮಕ ಎಂದೆನಿಸಿರುವ ಡಿಸಿಷನ್ ರಿವ್ಯೂ ಸಿಸ್ಟಂಗೆ (ಡಿಆರ್‌ಎಸ್) ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿರುವ ಭಾರತೀಯ ಕ್ರಿಕೆಟ್ ಮಂಡಳಿಯು (ಬಿಸಿಸಿಐ), ಇದೇ ತಿಂಗಳ 16ರಿಂದ ಆರಂಭಗೊಳ್ಳಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಆ ತಂತ್ರಜ್ಞಾನ ಅಳವಡಿಸುವ ಪ್ರಮೇಯದಿಂದ ಹಿಂದೆ ಸರಿದಿದೆ.

ಇತ್ತೀಚೆಗೆ, ಡಿಆರ್‌ಎಸ್ ವ್ಯವಸ್ಥೆಯು ಅವಲಂಬಿತವಾಗಿರುವ ‘ಹಾಕ್ ಐ’ ತಂತ್ರಜ್ಞಾನದ ಕುರಿತಂತೆ ಟೀಂ ಇಂಡಿಯಾಕ್ಕೆ ಅರುಹಲು ಕೆಲ ಪ್ರಯತ್ನಗಳು ನಡೆದಿದ್ದವು. ಆದರೆ, ಅನಿಲ್ ಕುಂಬ್ಳೆ ಮಾರ್ಗದರ್ಶನದ ಟೀಂ ಇಂಡಿಯಾ ಹಾಕ್ ಐ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿಲ್ಲದಿರುವುದರಿಂದ ಇದು ಕಾರ್ಯರೂಪಕ್ಕೆ ಬಂದಿಲ್ಲ ಎನ್ನಲಾಗಿದೆ.

ಆದರೆ, ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಈ ಬಗ್ಗೆ ಚರ್ಚೆ ನಡೆಯಲೆಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಶೀಘ್ರದಲ್ಲೇ ಇದು ಮಾನ್ಯವಾದರೆ, ಇದೇ ವರ್ಷಾಂತ್ಯಕ್ಕೆ ಭಾರತಕ್ಕೆ ಆಗಮಿಸಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆಗೆ ಡಿಆರ್‌ಎಸ್ ಅಳವಡಿಸಿಕೊಳ್ಳುವುದು ಸ್ಪಷ್ಟವಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?