ವಿಂಡೀಸ್ ಪ್ರವಾಸಕ್ಕೆ ಟೀಮ್ ಇಂಡಿಯಾ ಆಯ್ಕೆ; ಇಬ್ಬರು ಹೊಸಬರಿಗೆ ಚಾನ್ಸ್

By Suvarna Web DeskFirst Published Jun 15, 2017, 5:51 PM IST
Highlights

ಕುಲದೀಪ್ ಯಾದವ್ ಮತ್ತು ರಿಷಭ್ ಪಂತ್ ಇಬ್ಬರೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್'ಗೆ ಪದಾರ್ಪಣೆಯಾಗಬೇಕಿದೆ. ಸದ್ಯ, ಇವರಿಬ್ಬರನ್ನು ತಂಡದಲ್ಲಿ ಮೀಸಲು ಆಟಗಾರರಾಗಿ ಸೇರಿಸಿಕೊಳ್ಳಲಾಗಿದೆ. ಪ್ರವಾಸದಲ್ಲಿ ಯಾರಿಗಾದರೂ ಗಾಯದ ಸಮಸ್ಯೆಯಾದಲ್ಲಿ ಇವರಿಗೆ ಆಡುವ ಭಾಗ್ಯ ಸಿಗಲಿದೆ.

ನವದೆಹಲಿ(ಜೂನ್ 15): ಚಾಂಪಿಯನ್ಸ್ ಟ್ರೋಫಿ ಬಳಿಕ ಭಾರತ ಕೈಗೊಳ್ಳಲಿರುವ ವೆಸ್ಟ್ ಇಂಡೀಸ್ ಪ್ರವಾಶಕ್ಕೆ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಸದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುತ್ತಿರುವ ಭಾರತ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ. ಎರಡು ಬದಲಾವಣೆ ಮಾತ್ರ ಮಾಡಲಾಗಿದೆ. ರೋಹಿತ್ ಶರ್ಮಾ ಮತ್ತು ಜಸ್'ಪ್ರೀತ್ ಬುಮ್ರಾ ಬದಲು ರಿಷಭ್ ಪಂತ್ ಮತ್ತು ಕುಲದೀಪ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.

ಮಾರ್ಚ್ ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕುಲದೀಪ್ ಯಾದವ್ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ್ದರು. ಅವರು ಆಡಿರುವ ಏಕೈಕ ಟೆಸ್ಟ್ ಮ್ಯಾಚ್'ನಲ್ಲಿ ಉತ್ತಮ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.

ಇನ್ನು, ಅಂಡರ್-19 ವಿಶ್ವಕಪ್ ಮೂಲಕ ಗಮನ ಸೆಳೆದಿದ್ದ ರಿಷಭ್ ಪಂತ್ ಈ ಬಾರಿಯ ಐಪಿಎಲ್'ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇದೇ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ್ದಾರೆ.

ಕುಲದೀಪ್ ಯಾದವ್ ಮತ್ತು ರಿಷಭ್ ಪಂತ್ ಇಬ್ಬರೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್'ಗೆ ಪದಾರ್ಪಣೆಯಾಗಬೇಕಿದೆ. ಸದ್ಯ, ಇವರಿಬ್ಬರನ್ನು ತಂಡದಲ್ಲಿ ಮೀಸಲು ಆಟಗಾರರಾಗಿ ಸೇರಿಸಿಕೊಳ್ಳಲಾಗಿದೆ. ಪ್ರವಾಸದಲ್ಲಿ ಯಾರಿಗಾದರೂ ಗಾಯದ ಸಮಸ್ಯೆಯಾದಲ್ಲಿ ಇವರಿಗೆ ಆಡುವ ಭಾಗ್ಯ ಸಿಗಲಿದೆ. ಆದರೆ, ಜಸ್'ಪ್ರೀತ್ ಬುಮ್ರಾ ಅವರನ್ನು ಕೈಬಿಟ್ಟಿರುವುದು ಅಚ್ಚರಿಯ ನಿರ್ಧಾರವೆನಿಸಿದೆ.

ವೇಳಾಪಟ್ಟಿ:
ಜೂನ್ 23ರಿಂದ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ 5 ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟಿ20 ಪಂದ್ಯ ಆಡಲಿದೆ. ಜೂನ್ 23, 25, 30 ಹಾಗೂ ಜುಲೈ 2 ಮತ್ತು 6 ರಂದು ಏಕದಿನ ಪಂದ್ಯಗಳು ನಡೆಯಲಿವೆ. ಜುಲೈ 9ರಂದು ಟಿ20 ಪಂದ್ಯ ನಡೆಯಲಿದೆ.

ಟೀಮ್ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರಿಷಭ್ ಪಂತ್, ಅಜಿಂಕ್ಯ ರಹಾನೆ, ಎಂಎಸ್ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುನವೇಶ್ವರ್ ಕುಮಾರ್, ಕುಲದೀಪ್ ಯಾದವ್ ಮತ್ತು ದಿನೇಶ್ ಕಾರ್ತಿಕ್.

click me!