
ದುಬೈ(ಮೇ.03): ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)ಯ ನೂತನ ಟಿ-20 ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 4ನೇ ಸ್ಥಾನಕ್ಕೆ ಕುಸಿದಿದೆ.
ಒಟ್ಟು 6 ರೇಟಿಂಗ್ ಅಂಕಗಳನ್ನು ಕಳೆದುಕೊಳ್ಳುವ ಮೂಲಕ 2ನೇ ಸ್ಥಾನದಲ್ಲಿದ್ದ ಭಾರತ ಒಟ್ಟು 118 ಅಂಕಗಳೊಂದಿಗೆ 4ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಇನ್ನು 125 ಅಂಕಳೊಂದಿಗೆ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದ್ದರೆ, 121 ಅಂಕ ಗಳಿಸಿರುವ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಉಳಿದಂತೆ, ದಕ್ಷಿಣ ಆಫ್ರಿಕಾ 5, ಆಸ್ಪ್ರೇಲಿಯಾ 6, ವೆಸ್ಟ್‌ಇಂಡಿಸ್ 7, ಶ್ರೀಲಂಕಾ 8, ಆಫ್ಘಾನಿಸ್ತಾನ 9 ಹಾಗೂ ಬಾಂಗ್ಲಾದೇಶ 10ನೇ ಸ್ಥಾನದಲ್ಲಿವೆ.
ಭಾರತಕ್ಕಿಂತ ಮೂರು ಅಂಕ ಮುಂದಿರುವ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟರೆ, ಕೇವಲ 95 ಅಂಕ ಹೊಂದಿರುವ ಶ್ರೀಲಂಕಾ ತಂಡ ಎಂಟನೇ ಸ್ಥಾನಕ್ಕೆ ತಳ್ಳಲ್ಪಟ್ಟು ಆಶ್ಚರ್ಯಚಕಿತರನ್ನಾಗಿಸಿದೆ.
ಹೀಗಿದೆ ಐಸಿಸಿ ಬಿಡುಗಡೆ ಮಾಡಿದ ನೂತನ ಶ್ರೇಯಾಂಕ ಪಟ್ಟಿ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.