
ಮಳೆಯಾಟದ ನಡುವೆಯೂ ಛಲಬಿಡದೇ ಹೋರಾಡಿದ ಟೀಂ ಇಂಡಿಯಾ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20ಯಲ್ಲಿ ಗೆಲುವಿನ ನಗೆ ಬೀರಿದೆ.
ಮೊದಲು ಫೀಲ್ಡಿಂಗ್ ಮಾಡುವ ನಿರ್ಣಯ ಕೈಗೊಂಡ ವಿರಾಟ್ ಕೊಹ್ಲಿಯ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬೌಲರ್'ಗಳು, ಆಸ್ಟ್ರೇಲಿಯಾವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಈ ಮಧ್ಯ ಮಳೆಯ ನಡುವೆ 6 ಓವರ್'ಗೆ 48 ರನ್ ಗೆಲುವಿನ ಗುರಿ ಪಡೆದ ವಿರಾಟ್ ಪಡೆ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದ್ದು ನಮಗೆ ಗೊತ್ತೇ ಇದೆ..
ಆದ್ರೆ ನಿಮಗೆ ಗೊತ್ತಿಲ್ಲದ ಕೆಲವು ಅಂಕಿ-ಅಂಶಗಳು ಇಲ್ಲಿವೆ ನೋಡಿ...
* ಟಿ20 ಕ್ರಿಕೆಟ್'ನ ಒಂದೇ ಇನಿಂಗ್ಸ್'ನಲ್ಲಿ ಆಸ್ಟ್ರೇಲಿಯಾ ಬ್ಯಾಟ್ಸ್'ಮನ್'ಗಳ ಪೈಕಿ 6 ಮಂದಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದ್ದು ಇದೇ ಮೊದಲು
* ಆಸ್ಟ್ರೇಲಿಯಾ ವಿರುದ್ಧ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಮುನ್ನಡೆಸಿದ ಎರಡನೇ ನಾಯಕ ಎಂಬ ಶ್ರೇಯಕ್ಕೆ ವಿರಾಟ್ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಧೋನಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು.
* ನಿರ್ದಿಷ್ಟ ಒಂದು ತಂಡದ ಟಿ20 ಕ್ರಿಕೆಟ್'ನಲ್ಲಿ ವಿರುದ್ಧ ಸತತ 7 ಜಯ ದಾಖಲಿಸಿದ 3ನೇ ತಂಡ ಎಂಬ ಕೀರ್ತಿಗೆ ಟೀಂ ಇಂಡಿಯಾ ಪಾತ್ರವಾಯಿತು. ಈ ಮೊದಲು ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ಸತತ 7 ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿದ್ದವು.
* ಆಸ್ಟ್ರೇಲಿಯಾ ಪ್ರವಾಸದಲ್ಲಿ ಯುಜುವೇಂದ್ರ ಚಾಹಲ್ 4ನೇ ಬಾರಿಗೆ ಗ್ಲೇನ್ ಮ್ಯಾಕ್ಸ್'ವೆಲ್ ಅವರನ್ನು ಪೆವಿಲಿಯನ್'ಗೆ ಕಳಿಸಿದ ಸಾಧನೆ ಮಾಡಿದರು.
* 2012ರಿಂದ ಇಲ್ಲಿಯವರೆಗೆ ಆಸ್ಟ್ರೇಲಿಯಾ ವಿರುದ್ಧ 7 ಟಿ20 ಪಂದ್ಯಗಳನ್ನಾಡಿದ್ದು, ಟೀ ಇಂಡಿಯಾ ಸತತವಾಗಿ 7 ಪಂದ್ಯದಲ್ಲೂ ಗೆಲುವಿನ ನಗೆ ಬೀರಿದೆ.
* ಇಲ್ಲಿಯವರೆಗೆ ಆಸ್ಟ್ರೇಲಿಯಾ ಹಾಗೂ ಭಾರತ 14 ಬಾರಿ ಟಿ20 ಕ್ರಿಕೆಟ್'ನಲ್ಲಿ ಮುಖಾಮುಖಿಯಾಗಿದ್ದು, ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ 8ನೇ ನಾಯಕ..!
* ಟೀಂ ಇಂಡಿಯಾ ಈ ಟಿ20 ಪಂದ್ಯದಲ್ಲಿ 50ನೇ ಗೆಲುವಿಗೆ ಸಾಕ್ಷಿಯಾಯಿತು. ಅಲ್ಲದೇ ಈ ಸಾಧನೆ ಮಾಡಿದ 4ನೇ ತಂಡ ಎಂಬ ದಾಖಲೆಯನ್ನೂ ಕೊಹ್ಲಿ ಪಡೆ ತನ್ನದಾಗಿಸಿಕೊಂಡಿತು. ಇದಕ್ಕೂ ಮೊದಲು ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳು ಈ ಸಾಧನೆ ಮಾಡಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.