
ನವದೆಹಲಿ(ಜು.25): 2008ರ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿತು. ಸೆ.15 ರಿಂದ ಟೂರ್ನಿ ಆರಂಭಗೊಳ್ಳಲಿದ್ದು ಯುಎಇ ಆತಿಥ್ಯ ವಹಿಸಲಿದೆ. ದುಬೈ ಹಾಗೂ ಅಬುಧಾಬಿಯಲ್ಲಿ ಪಂದ್ಯಗಳು ನಡೆಯಲಿವೆ.
2019ರಲ್ಲಿ ಏಕದಿನ ವಿಶ್ವಕಪ್ ನಡೆಯುವುದರಿಂದ ಈ ಬಾರಿ ಟೂರ್ನಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಆಫ್ಘಾನಿಸ್ತಾನ ತಂಡಗಳು ತಮ್ಮ ಸ್ಥಾನ ಗಳನ್ನು ಖಚಿತಪಡಿಸಿಕೊಂಡಿವೆ. ಯುಎಇ,ಸಿಂಗಾಪುರ, ಓಮನ್, ನೇಪಾಳ, ಮಲೇಷ್ಯಾ, ಹಾಂಕಾಂಗ್ ಅರ್ಹತಾ ಸುತ್ತಿನಲ್ಲಿ ಸೆಣಸಾಡಲಿವೆ.
ಈ ಪೈಕಿ ಒಂದು ತಂಡ ಪ್ರಧಾನ ಹಂತಕ್ಕೇರಲಿದೆ. ಭಾರತ, ಪಾಕಿಸ್ತಾನ ಹಾಗೂ ಅರ್ಹತೆ ಪಡೆಯುವ ತಂಡ ‘ಎ’ ಗುಂಪಿನಲ್ಲಿವೆ. ಶ್ರೀಲಂಕಾ, ಬಾಂಗ್ಲಾ, ಆಫ್ಘಾನಿಸ್ತಾನ ‘ಬಿ’ ಗುಂಪಿನಲ್ಲಿವೆ. ಸೆ.18ಕ್ಕೆ ಭಾರತ, ಅರ್ಹತೆ ಪಡೆಯುವ ತಂಡದ ವಿರುದ್ಧ ಮೊದಲ ಪಂದ್ಯವನ್ನಾಡಲಿ ದ್ದು, ಸೆ.19ಕ್ಕೆ ಪಾಕಿಸ್ತಾನವನ್ನು ಎದುರಿಸಲಿದೆ.
ಗುಂಪಿನಲ್ಲಿ ಅಗ್ರ 2 ಸ್ಥಾನ ಪಡೆಯುವ ತಂಡಗಳು, ‘ಸೂಪರ್ 4’ ಹಂತಕ್ಕೆ ಪ್ರವೇಶಿಸಲಿವೆ. ಈ ಹಂತದಲ್ಲಿ ಪ್ರತಿ ತಂಡ ಉಳಿದ ೩ ತಂಡಗಳೊಂದಿಗೆ ಸೆಣಸಲಿದೆ.ಸೆ.28ಕ್ಕೆ ದುಬೈನಲ್ಲಿ ಫೈನಲ್ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.