
ಚೆನ್ನೈ(ಸೆ.17): ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.
ಆಸೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯವು ಇಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡುವ ನಿರೀಕ್ಷೆಯಲ್ಲಿರುವ ವಿರಾಟ್ ಪಡೆ ಬಲಿಷ್ಟ ತಂಡದೊಂದಿಗೆ ಕಣಕ್ಕಿಳಿದಿದೆ. ರೋಹಿತ್ ಶರ್ಮಾರೊಂದಿಗೆ ಅಜಿಂಕ್ಯ ರಹಾನೆ ಆರಂಭಿಕರಾಗಿ ಕಣಕ್ಕಿಳಿಯಲ್ಲಿದ್ದು, ನಾಯಕ ವಿರಾಟ್ ಕೊಹ್ಲಿ, ಕನ್ನಡಿಗ ಮನೀಶ್ ಪಾಂಡೆ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಧೋನಿ, ಜಾದವ್, ಪಾಂಡ್ಯ ಸಿಡಿದರೆ ಬೃಹತ್ ಮೊತ್ತ ಕಲೆಹಾಕುವುದು ಕಷ್ಟವಾಗಲಾರದು.
ಉಭಯ ತಂಡಗಳು ಹೀಗಿವೆ
ಭಾರತ:
ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ವಿರಾಟ್ ಕೊಹ್ಲಿ, ಮನಿಶ್ ಪಾಂಡೆ, ಎಂಎಸ್ ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್'ಪ್ರೀತ್ ಬುಮ್ರಾ
ಆಸ್ಟ್ರೇಲಿಯಾ:
ಡೇವಿಡ್ ವಾರ್ನರ್, ಹಿಲ್ಟನ್ ಕಾರ್ಟ್'ರೈಟ್, ಸ್ಟೀವ್ ಸ್ಮಿತ್, ತ್ರಾವೀಸ್ ಹೆಡ್, ಗ್ಲೇನ್ ಮ್ಯಾಕ್ಸ್'ವೆಲ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್, ಜೇಮ್ಸ್ ಫಾಲ್ಕನರ್, ಪ್ಯಾಟ್ ಕಮ್ಮೀನ್ಸ್, ನಾಥನ್ ಕೌಲ್ಟರ್'ನಿಲ್, ಆಡಂ ಜಂಪಾ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.