ಇಂಡಿಯಾ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಚೀನಾದ ಹುವಾಂಗ್ ಯುಕ್ಸಿಯಾಂಗ್ ವಿರುದ್ಧ 14-21, 21-16, 21-19 ಗೇಮ್‌ಗಳಲ್ಲಿ ರೋಚಕ ಗೆಲುವು ಸಾಧಿಸಿ, ಶ್ರೀಕಾಂತ್ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟರು.
ನವದೆಹಲಿ(ಮಾ.31): 17 ತಿಂಗಳುಗಳ ಬಳಿಕ ಭಾರತದ ತಾರಾ ಶಟ್ಲರ್ ಕಿದಂಬಿ ಶ್ರೀಕಾಂತ್ ಪ್ರಮುಖ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪ್ರವೇಶಿಸಿದ್ದಾರೆ.
ಇಲ್ಲಿ ನಡೆಯುತ್ತಿರುವ ಇಂಡಿಯಾ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಚೀನಾದ ಹುವಾಂಗ್ ಯುಕ್ಸಿಯಾಂಗ್ ವಿರುದ್ಧ 14-21, 21-16, 21-19 ಗೇಮ್‌ಗಳಲ್ಲಿ ರೋಚಕ ಗೆಲುವು ಸಾಧಿಸಿ, ಶ್ರೀಕಾಂತ್ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟರು.
undefined
ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಪಾರುಪಳ್ಳಿ ಕಶ್ಯಪ್, ಡೆನ್ಮಾರ್ಕ್ನ ವಿಕ್ಟರ್ ಅಕ್ಸೆಲ್ಸನ್ ವಿರುದ್ಧ 11-21, 17-21 ನೇರ ಗೇಮ್‌ಗಳಲ್ಲಿ ಪರಾಭವಗೊಂಡು ಹೊರಬಿದ್ದರು. ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ಶ್ರೀಕಾಂತ್ ಹಾಗೂ ಅಕ್ಸೆಲ್ಸನ್ ಪ್ರಶಸ್ತಿಗಾಗಿ ಸೆಣಸಲಿದ್ದಾರೆ.
ಮಹಿಳಾ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಪಿ.ವಿ.ಸಿಂಧು, ಚೀನಾದ ಹೇ ಬಿಂಗ್‌ಜಿಯೋ ವಿರುದ್ಧ 21-23, 18-21 ನೇರ ಗೇಮ್‌ಗಳಲ್ಲಿ ಸೋಲುಂಡು ನಿರಾಸೆ ಅನುಭವಿಸಿದರು. ಈ ವರ್ಷ ಮೊದಲ ಪ್ರಶಸ್ತಿ ಗೆಲ್ಲುವ ಭಾರತೀಯ ಆಟಗಾರ್ತಿಯ ಕನಸು ಭಗ್ನಗೊಂಡಿತು. ಇದೇ ವೇಳೆ ಪುರುಷರ ಡಬಲ್ಸ್ ಸೆಮೀಸ್‌ನಲ್ಲಿ ಭಾರತದ ಮನು ಅತ್ರಿ ಹಾಗೂ ಸುಮಿತ್ ರೆಡ್ಡಿ 12-21, 17-21 ಗೇಮ್‌ಗಳಲ್ಲಿ ಸೋಲುಂಡರು.