
ನವದೆಹಲಿ(ಜು.03): ಜಕರ್ತಾ ಏಷ್ಯನ್ ಗೇಮ್ಸ್‌ಗೆ ಭಾರತ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ನವದೆಹಲ್ಲಿಂದು 2018ರ ಏಷ್ಯನ್ ಗೇಮ್ಸ್‌ಗೆ ತೆರಳೋ ಭಾರತೀಯ ಕ್ರೀಡಾಪಟುಗಳ ಪಟ್ಟಿಯನ್ನ ಭಾರತೀಯ ಒಲಿಂಪಿಕ್ ಸಂಸ್ಥೆ(ಐಓಎ) ಬಿಡುಗಡೆ ಮಾಡಿದೆ. ಈ ಬಾರಿ 524 ಕ್ರೀಡಾಪಟುಗಳು ಏಷ್ಯನ್ ಗೇಮ್ಸ್ ಕೂಟದಲ್ಲಿ ಭಾರತವನ್ನ ಪ್ರತನಿಧಿಸಲಿದ್ದಾರೆ.
ಇಂಡೋನೇಷಿಯಾದ ಜಕರ್ತಾದಲ್ಲಿ ಆಗಸ್ಟ್ 18 ರಿಂದ ಸೆಪ್ಟೆಂಬರ್ 2ರ ವರೆಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟ ನಡೆಯಲಿದೆ. ಇದಕ್ಕಾಗಿ ಭಾರತ 277 ಪುರುಷ ಹಾಗೂ 247 ಮಹಿಳಾ ಕ್ರೀಡಾಪಟುಗಳನ್ನ ಐಒಎ ಆಯ್ಕೆ ಮಾಡಿದೆ. 2014ರ ಇಂಚಿಯೋನ್ ಏಷನ್ ಗೇಮ್ಸ್‌ಗೆ ಭಾರತ 541 ಕ್ರೀಡಾಪಟುಗಳನ್ನ ಕಳುಹಿಸಿತ್ತು.
ಭಾರತದ ಓಟ್ಟು 524 ಕ್ರೀಡಾಪಟುಗಳು 36 ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ. 2020ರ ಟೋಕಿಯೋ ಒಲಿಂಪಿಕ್ಸ್ ದೃಷ್ಠಿಯಿಂದ ಕ್ರೀಡಾಪಟುಗಳನ್ನ ಆಯ್ಕೆ ಮಾಡಲಾಗಿದೆ. ಒಲಿಂಪಿಕ್ಸ್‌ಗಾಗಿ ಈಗಿನಿಂದಲೇ ಭಾರತೀಯ ಕ್ರೀಡಾಪಟುಗಳ ತಯಾರಿ ಆರಂಭಗೊಂಡಿದೆ. ಇದೀಗ ಏಷ್ಯನ್ ಗೇಮ್ಸ್ ಕೂಡ ಸಹಕಾರಿಯಾಗಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಮುಖ್ಯ ಕಾರ್ಯದರ್ಶಿ ರಾಜೀವ್ ಮೆಹ್ತಾ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.