
ನವದೆಹಲಿ(ಜ.10): ಇಂಗ್ಲೆಂಡ್ ಸರಣಿಗೂ ಮುನ್ನ ಟೀಂ ಇಂಡಿಯಾ ಎರಡು ಟಿ20 ಪಂದ್ಯಗಳ ಸರಣಿಯನ್ನಾಡಲು ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಕ್ರಿಕೆಟ್ ಟೂರ್ನಿಯಿರುವುದರಿಂದ ಅದಕ್ಕೆ ಪೂರ್ವಭಾವಿಯಾಗಿ ಐರ್ಲೆಂಡ್'ನ ಡುಬ್ಲಿನ್'ನಲ್ಲಿ ಜೂನ್ 27 ಮತ್ತು 29ರಂದು ಭಾರತ ತಂಡವು ಎರಡು ಟಿ20 ಪಂದ್ಯಗಳ ಸರಣಿಯನ್ನಾಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ತಿಳಿಸಿದ್ದಾರೆ.
ಭಾರತ ತಂಡವು ಕಡೆಯ ಬಾರಿ 2007ರಲ್ಲಿ ಐರ್ಲೆಂಡ್ ಪ್ರವಾಸ ಕೈಗೊಂಡಾಗ ಏಕದಿನ ಪಂದ್ಯವೊಂದರಲ್ಲಿ ಭಾರತ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ 9 ವಿಕೆಟ್'ಗಳ ಜಯ ದಾಖಲಿಸಿತ್ತು. ಇನ್ನು ಟಿ20 ಮಾದರಿಯಲ್ಲಿ 2009ರ ಐಸಿಸಿ ಟಿ20 ವಿಶ್ವಕಪ್'ನಲ್ಲಿ ಉಭಯ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದವು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.