
ಮುಂಬೈ(ಆ.13): ಮುಂದಿನ ವರ್ಷದ ಆರಂಭದಲ್ಲಿ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐನ ಪ್ರಧಾನ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಜೋಹ್ರಿ ಸ್ಪಷ್ಟಪಡಿಸಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ಶ್ರೀಲಂಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಭಾರತ, ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವುದು ಸಂಶಯವಾಗಿತ್ತು.
ಈ ಹಿನ್ನೆಲೆಯಲ್ಲಿ ಈ ಕುರಿತು ಹೇಳಿಕೆ ನೀಡಿರುವ ಜೋಹ್ರಿ, ‘ಭಾರತ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ದಿನಾಂಕದಲ್ಲಿ ಕೊಂಚ ಬದಲಾವಣೆ ಆಗಬಹುದು. ಇದು ಪೂರ್ಣ ಪ್ರಮಾಣದ ಪ್ರವಾಸ ಆಗಲಿದೆ’ ಎಂದು ಅವರು ಹೇಳಿದರು.
ಶ್ರೀಲಂಕಾ ತಂಡವು ನವೆಂಬರ್-ಡಿಸೆಂಬರ್'ನಲ್ಲಿ ಮೂರು ಟೆಸ್ಟ್, 5 ಏಕದಿನ ಹಾಗೂ ಏಕೈಕ ಟಿ20 ಪಂದ್ಯವಾಡಲು ಭಾರತ ಪ್ರವಾಸ ಕೈಗೊಳ್ಳಲಿದೆ.
ಇದೇವೇಳೆ ಬಿಸಿಸಿಐ ಮಹಿಳಾ ಐಪಿಎಲ್ ಟೂರ್ನಿ ಆಯೋಜಿಸಲಿದೆಯೇ ಎಂಬ ಪತ್ರಕರ್ತರ ಪ್ರಶ್ನೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಜೋಹ್ರಿ, ಸಧ್ಯಕ್ಕೆ ಬಿಸಿಸಿಐ ಆ ಬಗ್ಗೆ ಯೋಚಿಸಿಲ್ಲ, ಆದರೆ ಮಹಿಳಾ ಕ್ರಿಕೆಟ್ ಅಭಿವೃದ್ದಿಗಾಗಿ ಸೂಕ್ತಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.