ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ ಪ್ರಕಟ!

Published : May 09, 2019, 09:31 AM ISTUpdated : May 09, 2019, 11:47 AM IST
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ  ವೇಳಾಪಟ್ಟಿ ಪ್ರಕಟ!

ಸಾರಾಂಶ

ಭಾರತ ಹಾಗೂ ಆಸ್ಟ್ರೇಲಿಯಾ ನಡವಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ವೇಳಾಪಟ್ಟಿ ಪ್ರಕಟಗೊಂಡಿದೆ. 3 ಏಕದಿನ ಪಂದ್ಯಗಳ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ.

ಸಿಡ್ನಿ(ಮೇ.09): ಕ್ರಿಕೆಟ್‌ ಆಸ್ಪ್ರೇಲಿಯಾ ಹಾಗೂ ಬಿಸಿಸಿಐ ನಡುವಿನ ಏಕದಿನ ಸರಣಿ ಬಿಕ್ಕಟ್ಟು ಶಮನಗೊಂಡಿದೆ. ಬಿಸಿಸಿಐ ಒತ್ತಡಕ್ಕೆ ಮಣಿದಿರುವ ಕ್ರಿಕೆಟ್‌ ಆಸ್ಪ್ರೇಲಿಯಾ, 2020ರ ಜನವರಿಯಲ್ಲಿ 3 ಏಕದಿನ ಪಂದ್ಯಗಳ ಸರಣಿಗಾಗಿ ಆಸೀಸ್‌ ತಂಡವನ್ನು ಭಾರತಕ್ಕೆ ಕಳುಹಿಸಲು ಒಪ್ಪಿಗೆ ಸೂಚಿಸಿದೆ. ಮಂಗಳವಾರ ಕ್ರಿಕೆಟ್‌ ಆಸ್ಪ್ರೇಲಿಯಾ 2019-2020ರ ವೇಳಾಪಟ್ಟಿಯನ್ನು ತನ್ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಪ್ರಕಟಿಸಿತು. 

ಇದನ್ನೂ ಓದಿ: ವಿಶ್ವಕಪ್ 2019: ಕ್ರಿಕೆಟಿಗರ ಜೊತೆ ಪತ್ನಿಯರ ಪ್ರವಾಸ- ಬಿಸಿಸಿಐನಿಂದ ಮಹತ್ವ ನಿರ್ಧಾರ!

ಭಾರತ ಪ್ರವಾಸದಿಂದಾಗಿ ತವರಿನಲ್ಲಿ ನಡೆಯಬೇಕಿದ್ದ ಚಾಪೆಲ್‌-ಹ್ಯಾಡ್ಲಿ ಸರಣಿಯನ್ನು ಮಾರ್ಚ್‌ಗೆ ಮುಂದೂಡುವ ಅನಿವಾರ್ಯತೆಗೆ ಕ್ರಿಕೆಟ್‌ ಆಸ್ಪ್ರೇಲಿಯಾ ಸಿಲುಕಿದೆ. ಭಾರತ ಪ್ರವಾಸ ಕೈಗೊಳ್ಳದಿದ್ದರೆ ಕೋಟ್ಯಂತರ ರುಪಾಯಿ ನಷ್ಟ ಅನುಭವಿಸಬೇಕಾದೀತು ಎಂದು ಬಿಸಿಸಿಐ, ಕ್ರಿಕೆಟ್‌ ಆಸ್ಪ್ರೇಲಿಯಾಗೆ ಎಚ್ಚರಿಸಿತ್ತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Ind vs SA 3rd T20I: ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?
ಲಿಯೋನೆಲ್ ಮೆಸ್ಸಿ ನೋಡಲಾಗದೇ ರೊಚ್ಚಿಗೆದ್ದ ಕೋಲ್ಕತಾ! ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಪೊಲೀಸರಿಂದ ಲಾಠಿಚಾರ್ಜ್