ಆಸ್ಟ್ರೇಲಿಯಾ ವಿರುದ್ಧದ 2 ಟಿ20 ಹಾಗೂ 5 ಏಕದಿನ ಸರಣಿಗೆ ಕೌಂಟ್‌ಡೌನ್ ಆರಂಭಗೊಂಡಿದೆ. ಫೆ.24 ರಿಂದ ಸರಣಿ ಆರಂಭಗೊಳ್ಳಲಿದೆ. ಆದರೆ ಸರಣಿ ಆರಂಭಕ್ಕೆ ಇನ್ನು 3 ದಿನ ಬಾಕಿ ಇರುವಾಗಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ.
ಬೆಂಗಳೂರು(ಫೆ.21): ಆಸ್ಟ್ರೇಲಿಯಾ ವಿರುದ್ದದ ಟಿ20 ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ತಯಾರಿ ಆರಂಭಿಸಿದೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟಿಗರು ತರಬೇತಿ ಆರಂಭಿಸಿದ್ದಾರೆ. ಸರಣಿಗೆ ಇನ್ನು 3 ದಿನ ಬಾಕಿ ಇರುವಾಗಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದಿಂದ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ.
ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಟಿ20, ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ!
undefined
ಬೆನ್ನು ನೋವಿಗೆ ತುತ್ತಾಗಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದಾರೆ. ಟೀಂ ಇಂಡಿಯಾ ವೈದ್ಯಕೀಯ ತಂಡ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಸೂಚಿಸಿದೆ. ಹೀಗಾಗಿ ಪಾಂಡ್ಯ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಬಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಗೆ ಹಾರ್ದಿಕ್ ಬದಲು ತಂಡಕ್ಕೆ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ!
2019ರ ವಿಶ್ವಕಪ್ ಟೂರ್ನಿ ದೃಷ್ಠಿಯಿಂದ ಆಸ್ಟ್ರೇಲಿಯಾ ವಿರುದ್ದದ ಸರಣಿ ಟೀಂ ಇಂಡಿಯಾ ಕ್ರಿಕೆಟಿಗರ ಪಾಲಿಗೆ ಮುಖ್ಯವಾಗಿದೆ. ಆಸಿಸ್ ಸರಣಿಯಲ್ಲಿ ಮಿಂಚಿದ ಕ್ರಿಕೆಟಿಗರು ವಿಶ್ವಕಪ್ ಟೂರ್ನಿಗೂ ಆಯ್ಕೆಯಾಗಲಿದ್ದಾರೆ. ಇದೀಗ ರವೀಂದ್ರ ಜಡೇಜಾ ವಿಶ್ವಕಪ್ ತಂಡದ ಆಯ್ಕೆ ಆಸೆ ಜೀವಂತವಾಗಿದ್ದರೆ, ಹಾರ್ದಿಕ್ ಪಾಂಡ್ಯಗೆ ಇಂಜುರಿ ಸಮಸ್ಯೆ ಅಡ್ಡವಾಗಲಿದೆ.