ಭಾರತ-ಆಸೀಸ್‌ ಬೆಂಗಳೂರು ಪಂದ್ಯ: ಟಿಕೆಟ್‌ಗೆ ಮುಗಿಬಿದ್ದ ಜನ

Published : Feb 20, 2019, 08:33 AM IST
ಭಾರತ-ಆಸೀಸ್‌ ಬೆಂಗಳೂರು ಪಂದ್ಯ: ಟಿಕೆಟ್‌ಗೆ ಮುಗಿಬಿದ್ದ ಜನ

ಸಾರಾಂಶ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಟಿಕೆಟ್ ಪಂದ್ಯದ ಟಿಕೆಟ್‌ಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚುಟುಕು ಸಮರ ವೀಕ್ಷಿಸಲು ಅಭಿಮಾನಿಗಳು ಕ್ರೀಡಾಂಗಣದ ಕೌಂಟರ್‌ ಬಳಿ ಸರದಿ ಸಾಲಿನಲ್ಲಿ ನಿಂತು ಟಿಕೆಟ್ ಪಡೆದುಕೊಂಡಿದ್ದಾರೆ.

ಬೆಂಗಳೂರು(ಫೆ.20):  ಆಸ್ಟ್ರೇಲಿಯಾ ವಿರುದ್ದದ 2ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಿದೆ.  ಫೆ.27 ರಂದು  ಈ ಟಿ20 ಪಂದ್ಯದ ಟಿಕೆಟ್‌ನ್ನು ಕ್ರೀಡಾಂಗಣದ ಕೌಂಟರ್‌ನಲ್ಲಿ ಪಡೆಯಲು ಮಂಗಳವಾರ ಅಭಿಮಾನಿಗಳು ಮುಗಿಬಿದ್ದಿದ್ದರು. 

ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಬೆಂಗಳೂರು ಟಿ20 ಪಂದ್ಯ-ಎಲ್ಲಿ ಸಿಗಲಿದೆ ಟಿಕೆಟ್?

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕ್ರಿಕೆಟ್‌ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತು ಟಿಕೆಟ್‌ ಖರೀದಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್‌್ತ ಮಾಡಲಾಗಿತ್ತು. ಅಲ್ಲದೇ ಕೌಂಟರ್‌ನ ಎದುರುಗಡೆ ಕ್ಯಾಮೆರಾ ಒಂದನ್ನು ಹಾಕಲಾಗಿದ್ದು ಟಿಕೆಟ್‌ ಮಾರಾಟ ಪಾರದರ್ಶಕವಾಗಿ ನಡೆಯುವಂತೆ ಎಚ್ಚರ ವಹಿಸಲಾಯಿತು.

ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಟಿ20, ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ!

ಫೆ.24 ರಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಆರಂಭಗೊಳ್ಳಲಿದೆ. ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. 2 ಟಿ20 ಪಂದ್ಯಗಳ ಬಳಿಕ 5 ಏಕದಿನ ಪಂದ್ಯ ನಡೆಯಲಿದೆ. ಮಾರ್ಚ್ 2 ರಿಂದ ಮಾರ್ಚ್ 13ರ ವರೆಗೆ ಏಕದಿನ ಸರಣಿ ಆಯೋಜನೆಯಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?