ಆಸ್ಟ್ರೇಲಿಯಾ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಂಭವನೀಯ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದಲ್ಲಿ ಕೆಲ ಬದಲಾವಣೆಗಳನ್ನ ಮಾಡಲಾಗಿದೆ. ಇಲ್ಲಿದೆ ಆಡೋ ಹನ್ನೊಂದರ ಬಳಗ ವಿವರ.
ಸಿಡ್ನಿ(ಜ.01): ಆಸ್ಟ್ರೇಲಿಯಾ ವಿರುದ್ಧದ ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಪಡೆದಿದೆ. ಇದೀಗ ಸಿಡ್ನಿಯಲ್ಲಿ ನಡೆಯಲಿರುವ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಗೆದ್ದು ಸರಣಿ ಗೆಲುವಿನ ವಿಶ್ವಾಸದಲ್ಲಿದೆ.
ಇದನ್ನೂ ಓದಿ: ಕ್ರಿಕೆಟ್‌ಗಾಗಿ ವಿರಾಟ್ ಕೊಹ್ಲಿ ಅತ್ತಿದ್ದು ಯಾವಾಗ?
ಸಿಡ್ನಿ ಪಂದ್ಯಕ್ಕೆ ಟೀಂ ಇಂಡಿಯಾ ಆಡೋ ಹನ್ನೊಂದರ ಬಳಗದಲ್ಲಿ ನಾಯಕ ವಿರಾಟ್ ಕೊಹ್ಲಿ ಕೆಲ ಬದಲಾವಣೆ ಮಾಡೋ ಸಾಧ್ಯತೆ ಇದೆ. ತಂದೆಯಾಗಿರುವ ರೋಹಿತ್ ಶರ್ಮಾ ಭಾರತಕ್ಕೆ ಆಗಮಿಸಿದ್ದಾರೆ. ಹೀಗಾಗಿ ರೋಹಿತ್ ಸ್ಥಾನದಲ್ಲಿ ಮತ್ತೊರ್ವ ಆಲ್ರೌಂಡರ್‌ಗೆ ಸ್ಥಾನ ನೀಡೋ ಸಾಧ್ಯತೆ ಇದೆ. ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಂಭವನೀಯ ತಂಡ ಇಲ್ಲಿದೆ.
ಇದನ್ನೂ ಓದಿ: ಕನ್ನಡದಲ್ಲಿ ಶುಭಕೋರಿದ ಜರ್ಮನಿ ಫುಟ್ಬಾಲ್ ಕ್ಲಬ್
ಸಂಭವನೀಯ ಭಾರತ ತಂಡ:
ವಿರಾಟ್ ಕೊಹ್ಲಿ(ನಾಯಕ), ಮಯಾಂಕ್ ಅಗರ್ವಾಲ್, ಹನುಮಾ ವಿಹಾರಿ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರಿಷಬ್ ಪಂತ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ