ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ- ಭಾರತದಲ್ಲಿ 2 ಬದಲಾವಣೆ

Published : Mar 13, 2019, 01:07 PM ISTUpdated : Mar 13, 2019, 01:26 PM IST
ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ- ಭಾರತದಲ್ಲಿ 2 ಬದಲಾವಣೆ

ಸಾರಾಂಶ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಏಕದಿನ ಪಂದ್ಯ ಫೈನಲ್ ಸ್ವರೂಪ ಪಡೆದಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.

ದೆಹಲಿ(ಮಾ.13): ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಸೋತಿರುವ ಟೀಂ ಇಂಡಿಯಾ ದೆಹಲಿ ಪಂದ್ಯಕ್ಕಾಗಿ ತಂಡದಲ್ಲಿ2 ಬದಲಾವಣೆ ಮಾಡಿದೆ. ಕೆಎಲ್ ರಾಹುಲ್ ಹಾಗೂ ಯಜುವೇಂದ್ರ ಚಹಾಲ್‌ಗೆ ವಿಶ್ರಾಂತಿ ನೀಡಲಾಗಿದ್ದು, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಂಡ ಸೇರಿಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಶಾನ್ ಮಾರ್ಶ್ ಬದಲು ಮಾರ್ಕಸ್ ಸ್ಟೊಯ್ನಿಸ್ ತಂಡ ಸೇರಿಕೊಂಡಿದ್ದಾರೆ. ಇಂಜುರಿಯಿಂದ ಬೆಹೆನ್‌ಡ್ರಾಫ್ ಬದಲು ನಥನ್ ಲಿಯೋನ್ ತಂಡ ಸೇರಿಕೊಂಡಿದ್ದಾರೆ. 

ಆರಂಭಿಕ 2 ಪಂದ್ಯ ಗೆದ್ದ ಟೀಂ ಇಂಡಿಯಾ ನಂತರ 2 ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಸದ್ಯ ಸರಣಿ 2-2 ಅಂತರದಲ್ಲಿ ಸಮಬಲಗೊಂಡಿದೆ. ಹೀಗಾಗಿ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಅಂತಿಮ ಪಂದ್ಯ ಗೆದ್ದ ತಂಡ ಸರಣಿ ಕೈವಶ ಮಾಡಲಿದೆ.

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?