ಇಂಡೋ-ಆಸಿಸ್ ಏಕದಿನ: ಟೀಂ ಇಂಡಿಯಾ ಸೇರಿಕೊಂಡ ಧೋನಿ-ರೋಹಿತ್!

Published : Jan 08, 2019, 09:10 AM IST
ಇಂಡೋ-ಆಸಿಸ್ ಏಕದಿನ: ಟೀಂ ಇಂಡಿಯಾ ಸೇರಿಕೊಂಡ ಧೋನಿ-ರೋಹಿತ್!

ಸಾರಾಂಶ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಜನನರಿ 12ರಿಂದ ಆರಂಭಗೊಳ್ಳಲಿದೆ. ಟೆಸ್ಟ್ ಸರಣಿ ಗೆದ್ದಿರುವ ಭಾರತ, ಇದೀಗ ಏಕದಿನ ಸರಣಿ ಗೆಲುವಿಗೆ ಹೊಂಚು ಹಾಕಿದೆ. ಇದಕ್ಕಾಗಿ ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ ತಂಡ ಸೇರಿಕೊಂಡಿದ್ದಾರೆ.  

ಸಿಡ್ನಿ(ಜ.08): ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯತ್ತ ಚಿತ್ತ ಹರಿಸಿದೆ. 3 ಏಕದಿನ ಪಂದ್ಯಗಳ ಸರಣಿ ಜನವರಿ 12 ರಿಂದ ಆರಂಭಗೊಳ್ಳಲಿದೆ. ಇದಕ್ಕಾಗಿ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 8 ಮತ್ತು 9 ಭಾರತ್‌ ಬಂದ್‌: ಏನಿರುತ್ತೆ, ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಸುದೀರ್ಘ ವಿಶ್ರಾಂತಿಯಲ್ಲಿದ್ದ ಎಂ.ಎಸ್.ಧೋನಿ ಇದೀಗ ಮತ್ತೆ ಟೀಂ ಇಂಡಿಯಾಗೆ ವಾಪಾಸ್ಸಾಗಿದ್ದಾರೆ. ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ದದ ಟಿ20  ಸರಣಿಯಿಂದ ಹೊರಗುಳಿದಿದ್ದ ಧೋನಿ, ಆಸಿಸ್ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿದ್ದರು. ಈಗಾಗಲೇ ಕಾಂಗರೂ ನಾಡಿಗೆ ತೆರಳಿರುವ ಧೋನಿ ತಂಡ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಗೆಲುವಿನ ಬಳಿಕ ಅಭಿಮಾನಿಗಳ ಜೊತೆ ಕೊಹ್ಲಿ ಡ್ಯಾನ್ಸ್!

ತಂದೆಯಾಗಿ ಬಡ್ತಿ ಪಡೆದ ಕಾರಣ ಟೆಸ್ಟ್ ಸರಣಿಯನ್ನ ಮೊಟಕುಗೊಳಿಸಿ ತವರಿಗೆ ವಾಪಾಸ್ಸಾದ ರೋಹಿತ್ ಶರ್ಮಾ ಇದೀಗ ಏಕದಿನ ಸರಣಿಗಾಗಿ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ. ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೆ ಡಿಸೆಂಬರ್ 30 ರಂದು ಹೆಣ್ಣು ಮುಗುವಿಗೆ ಜನ್ಮ ನೀಡಿದ್ದರು. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯ ಮಿಸ್ ಮಾಡಿಕೊಂಡ ತವರಿಗೆ ಮರಳಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?