ಎಂ.ಎಸ್.ಧೋನಿ ತವರಿನ ರಾಂಚಿ ಅಂಗಣದಲ್ಲಿ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಇಷ್ಟೇ ಅಲ್ಲ ತವರಿನಲ್ಲಿ ಐತಿಹಾಸಿಕ ಸಾಧನೆ ಮಾಡಲು ತಯಾರಿ ನಡೆಸಿದ್ದಾರೆ. ಧೋನಿ ತವರಿನಲ್ಲಿ ಬರೆಯಲಿರುವ ದಾಖಲೆ ಏನು? ಇಲ್ಲಿದೆ ವಿವರ.
ರಾಂಚಿ(ಮಾ.06): ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ರಾಂಚಿಯಲ್ಲಿ ಬೀಡುಬಿಟ್ಟಿದೆ. ಭರ್ಜರಿ ಫಾರ್ಮ್‌ನಲ್ಲಿರುವ ಎಂ.ಎಸ್.ಧೋನಿ ತವರಿನಲ್ಲಿ ದಾಖಲೆ ಬರೆಯಲು ಸಜ್ಜಾಗಿದೆ. ಈ ಮೂಲಕ ರಾಂಚಿ ಪಂದ್ಯವನ್ನು ಸ್ಮರಣೀಯವಾಗಿಸುವ ಲೆಕ್ಕಾಚಾರದಲ್ಲಿದ್ದಾರೆ.
ಇದನ್ನೂ ಓದಿ: ರಾಂಚಿಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಧೋನಿ ನೀಡಿದ್ರು ಸರ್ಪ್ರೈಸ್!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000 ರನ್ ಪೂರೈಸಲು ಧೋನಿಗಿನ್ನು 33 ರನ್‌ಗಳ ಅವಶ್ಯಕತೆ ಇದೆ. ಹೀಗಾಗಿ ತವರಿನಲ್ಲಿ ಐತಿಹಾಸಿಕ ಸಾಧನೆ ಮಾಡುವ ತವಕದಲ್ಲಿದ್ದಾರೆ. ಧೋನಿ ಏಕದಿನ ಕ್ರಿಕೆಟ್‌ನಲ್ಲಿ 10474 ರನ್, ಟೆಸ್ಟ್ ಕ್ರಿಕೆಟ್‌ನಲ್ಲಿ 4876 ರನ್ ಹಾಗೂ ಟಿ20 ಕ್ರಿಕೆಟ್‌ನಲ್ಲಿ 1617 ರನ್ ಸಿಡಿಸಿದ್ದಾರೆ.
ಇದನ್ನೂ ಓದಿ: ಅಭಿಮಾನಿ ಜೊತೆ ಮೈದಾನದಲ್ಲಿ ಓಡಾಡಿದ ಧೋನಿ
ಧೋನಿಗೂ ಮೊದಲು ಭಾರತದ ಪರ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ ಹಾಗೂ ವಿರೇಂದ್ರ ಸೆಹ್ವಾಗ್ 17 ಸಾವಿರಕ್ಕಿಂತಲೂ ಹೆಚ್ಚು ರನ್ ಪೂರೈಸಿದ್ದಾರೆ. ಇದೀಗ ಧೋನಿ ಈ ಸಾಧನೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.