ಮೊದಲ ಗೆಲುವಿನಿಂದ ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ ನಾಗ್ಪುರ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸಿದೆ. ದ್ವಿತೀಯ ಪಂದ್ಯಕ್ಕೆ ತಂಡದಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ಟೀಂ ಇಂಡಿಯಾ ಸಂಭನೀಯ ತಂಡ ಪ್ರಕಟಿಸಲಾಗಿದೆ.
ನಾಗ್ಪುರ(ಮಾ.04): ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿದೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಏಕದಿನದಲ್ಲಿ ಭಾರತ 6 ವಿಕೆಟ್ ಗೆಲುವು ಸಾಧಿಸಿತ್ತು. ಇದೀಗ ನಾಗ್ಪುರದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ಗೆಲವಿನ ವಿಶ್ವಾಸದಲ್ಲಿದೆ.
ಇದನ್ನೂ ಓದಿ: ಸುರೇಶ್ ರೈನಾ ದಾಖಲೆ ಮುರಿದ ಸ್ಮೃತಿ ಮಂಧನಾ
undefined
ದ್ವಿತೀಯ ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ನಿರಾಸೆ ಮೂಡಿಸಿದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಬದಲು ಕನ್ನಡಿಗ ಕೆ.ಎಲ್.ರಾಹುಲ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಪಾಕಿಸ್ತಾನಕ್ಕೆ ಮತ್ತೊಂದು ಶಾಕ್- PSL ಟೂರ್ನಿಯಿಂದ ಡಿವಿಲಿಯರ್ಸ್ ವಾಪಾಸ್!
ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ,ಕೇದಾರ್ ಜಾಧವ್, ವಿಜಯ್ ಶಂಕರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ