ನಾಗ್ಪುರ ಪಂದ್ಯ: ಆಸಿಸ್ ದಾಳಿಗೆ ಭಾರತದ ಮೊದಲ ವಿಕೆಟ್ ಪತನ!

By Web DeskFirst Published Mar 5, 2019, 1:52 PM IST
Highlights

ನಾಗ್ಪುರ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್
 

ನಾಗ್ಪುರ(ಮಾ.05): ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಮೊದಲ ಓವರ್‌ನಲ್ಲಿ ವಿಕೆಟ್ ಕಳೆದುಕೊಂಡಿದೆ. ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 6 ಎಸೆತ ಎದುರಿಸಿ ಶೂನ್ಯಕ್ಕೆ ಔಟಾದರು. ಇದೇ ಮೊದಲ ಬಾರಿಗೆ ರೋಹಿತ್ ಶರ್ಮಾ ತವರಿನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. 

ಇದನ್ನೂ ಓದಿ: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ; ಆಸಿಸ್ ತಂಡದಲ್ಲಿ 2 ಬದಲಾವಣೆ

ಆರಂಭಿಕ ಆಘಾತದಿಂದ ಶಿಖರ್ ಧವನ್ ಹಾಗೂ ನಾಯಕ ವಿರಾಟ್ ಕೊಹ್ಲಿ ಮೇಲೆ ಒತ್ತಡ ಹೆಚ್ಚಾಗಿದೆ. ನಾಗ್ಪುರದಲ್ಲಿ ಆಸಿಸ್ ವಿರುದ್ದ ಆಡಿದ 3 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದಿರುವ ಭಾರತ ಬೃಹತ್ ಮೊತ್ತ ದಾಖಲಿಸಲು ಎಚ್ಚರಿಕೆ ಹೆಜ್ಜೆ ಇಡಬೇಕಾಗಿದೆ.

ಇದನ್ನೂ ಓದಿ: ಐತಿಹಾಸಿಕ ದಾಖಲೆಯ ಹೊಸ್ತಿಲಲ್ಲಿ ಟೀಂ ಇಂಡಿಯಾ..!

ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಟೀಂ ಇಂಡಿಯಾ ದ್ವಿತೀಯ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡದೇ ಗೆಲುವಿನ ತಂಡವನ್ನೇ ಕಣಕ್ಕಿಳಿಸಿದೆ. ಈ ಮೂಲಕ 2ನೇ ಪಂದ್ಯದಲ್ಲೂ ಗೆಲುವನ್ನು ಎದುರುನೋಡುತ್ತಿದೆ. ಇತ್ತ ಆಸ್ಟ್ರೇಲಿಯಾ ಶಾನ್ ಮಾರ್ಶ್ ಹಾಗೂ ನಥನ್ ಲಿಯೋನ್ ತಂಡಕ್ಕೆ ಸೇರಿಸಿಕೊಂಡು 2 ಬದಲಾವಣೆ ಮಾಡಿದೆ.
 

click me!