ಇಂಡೋ-ಆಸಿಸ್ ಟಿ20: ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಗೆಲುವು-ಸರಣಿ ಸಮಬಲ!

Published : Nov 25, 2018, 04:56 PM IST
ಇಂಡೋ-ಆಸಿಸ್ ಟಿ20: ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಗೆಲುವು-ಸರಣಿ ಸಮಬಲ!

ಸಾರಾಂಶ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿ ಅಂತ್ಯಗೊಂಡಿದೆ. ರೋಚಕ ಘಟ್ಟದತ್ತ ಸಾಗಿದ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದ ಹೈಲೈಟ್ಸ್ ಇಲ್ಲಿದೆ.  

ಸಿಡ್ನಿ(ನ.25) : ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.  ಈ ಮೂಲಕ 3 ಪಂದ್ಯಗಳ ಸರಣಿಯನ್ನ 1-1 ಅಂತರದಲ್ಲಿ ಸಮಬಲಗೊಳಿಸಿದೆ. 

 

 

ಆಸ್ಟ್ರೇಲಿಯಾ ನೀಡಿದ 165 ರನ್ ಟಾರ್ಗೆಟ್ ಬೆನ್ನಟ್ಟಿದ ಟೀಂ ಇಂಡಿಯಾಗೆ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 67 ರನ್ ಜೊತೆಯಾಟ ನೀಡಿದರು.  ಧವನ್ 22 ಎಸೆತದಲ್ಲಿ 41 ರನ್ ಸಿಡಿಸಿ ಔಟಾದರು.

ರೋಹಿತ್ ಶರ್ಮಾ 23 ರನ್ ಸಿಡಿಸಿ ಔಟಾದರು. ಆದರೆ ನಾಯಕ ವಿರಾಟ್ ಕೊಹ್ಲಿ ಆಸರೆಯಾದರು.  ಮೊದಲೆರಡು ಪಂದ್ಯದಲ್ಲಿ ನಿರಾಸೆ ಅನುಭವಿಸಿದ ಕೆಎಲ್ ರಾಹುಲ್ ಅಂತಿಮ ಪಂದ್ಯದಲ್ಲೂ ಅಬ್ಬರಿಸಲಿಲ್ಲ. 14 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಅವರಸರದ ರಿಷಬ್ ಪಂತ್ ಶೂನ್ಯಕ್ಕೆ ಔಟಾದರು.

ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ಹೋರಾಟ ಭಾರತೀಯರಲ್ಲಿ ಮತ್ತೆ ಗೆಲುವಿನ ಆಸೆ ಚಿಗುರಿಸಿತು. ಕೊಹ್ಲಿ ಹಾಫ್ ಸೆಂಚುರಿ ಸಿಡಿಸೋ ಮೂಲಕ ಟೀಂ ಇಂಡಿಯಾ ಗೆಲುವಿನತ್ತ ದಾಪುಗಾಲಿಟ್ಟಿತು. ಕೊಹ್ಲಿ ಸಿಡಿಸಿದ ಅಜೇಯ 61 ರನ್ ಹಾಗೂ ಕಾರ್ತಿಕ್ ಅಜೇಯ 22 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 19.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.

ಅಂತಿಮ ಪಂದ್ಯದಲ್ಲಿ 6 ವಿಕೆಟ್ ಗೆಲುವು ಸಾಧಿಸಿದೆ ಟೀಂ ಇಂಡಿಯಾ ಸರಣಿಯನ್ನ 1-1 ಅಂತರದಲ್ಲಿ ಸಮಭಲಗೊಳಿಸಿತು. ಮೊದಲ ಪಂದ್ಯದಲ್ಲಿ ಮಳೆಯಿಂದಾಗಿ ಭಾರತ ಸೋಲು ಕಂಡರೆ, 2ನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?