ಇಂಡೋ-ಆಸಿಸ್ ಟೆಸ್ಟ್: 2ನೇ ಪಂದ್ಯಕ್ಕೂ ಮೊದಲೇ ಭಾರತಕ್ಕೆ ಹಿನ್ನಡೆ!

Published : Dec 12, 2018, 08:26 PM ISTUpdated : Dec 12, 2018, 08:43 PM IST
ಇಂಡೋ-ಆಸಿಸ್ ಟೆಸ್ಟ್: 2ನೇ ಪಂದ್ಯಕ್ಕೂ ಮೊದಲೇ ಭಾರತಕ್ಕೆ ಹಿನ್ನಡೆ!

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆರಂಭಿಕ ಪೃಥ್ವಿ ಶಾ ಅಲಭ್ಯರಾಗಿದ್ದಾರೆ.  ಹಾಗಾದರೆ ಪರ್ತ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಆರಂಭಿಸುವವರು ಯಾರು? ಇಲ್ಲಿದೆ ವಿವರ.  

ಪರ್ತ್(ಡಿ.12): ಇಂಜುರಿಗೆ ತುತ್ತಾಗಿರುವ ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಪರ್ತ್ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ. ಪೃಥ್ವಿ ಶಾ ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ.

ಇದನ್ನೂ ಓದಿ: ಡೆಲ್ಲಿ ,ಕೆಕೆಆರ್ ಬಳಿಕ ಹೊಸ ತಂಡದತ್ತ ಗೌತಮ್ ಗಂಭೀರ್?

ಪೃಥ್ವಿ ಶಾ ಅನುಪಸ್ಥಿತಿಯಿಂದ ಆರಂಭಿಕನಾಗಿ ಕನ್ನಡಿಗೆ ಕೆಎಲ್ ರಾಹುಲ್‌ಗೆ ಮತ್ತೊಂದು ಅವಕಾಶ ಸಿಗಲಿದೆ. ಹೀಗಾಗಿ ಪರ್ತ್ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಹಾಗೂ ಮುರಳಿ ವಿಜಯ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. 

ಇದನ್ನೂ ಓದಿ: ಐಪಿಎಲ್ ಹರಾಜು: ದಾಖಲೆ ಬರೀತಾರ ಈ ಐವರು ಕ್ರಿಕೆಟಿಗರು?

ಅಭ್ಯಾಸ ಪಂದ್ಯದ ವೇಳೆ ಪೃಥ್ವಿ ಶಾ ಕಾಲಿನ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್‌ಗಳ ಗೆಲುವು ಸಾಧಿಸಿತ್ತು. ಡಿಸೆಂಬರ್ 14 ರಿಂದ ಪರ್ತ್ ಕ್ರೀಡಾಂಗಣದಲ್ಲಿ 2ನೇ ಟೆಸ್ಟ್ ಆರಂಭವಾಗಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Good News for RCB Fans: ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ? KSCA-BCCI ಮಾತುಕತೆ
ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!